ನವದೆಹಲಿ: ವೈದ್ಯಕೀಯ ಪ್ರವೇಶಕ್ಕೆ ಅರ್ಹತೆಯ ಮಾನದಂಡವಾಗಿರುವ ನೀಟ್ ಪರೀಕ್ಷೆ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಧ್ಯಾಹ್ನ ಎರಡು ಗಂಟೆಗೆ ಪರೀಕ್ಷೆ ನಡೆಯಲಿದೆ. ದೇಶದ 3843 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 15.97 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ಕಾಪಾಡಲು ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಒಡಿಶಾ ಸರ್ಕಾರ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಮತ್ತು ವಸತಿ ಸೌಲಭ್ಯ ಒದಗಿಸಿದೆ. ರೈಲ್ವೇ ವಿಶೇಷ ರೈಲ್ಲಿನ ವ್ಯವಸ್ಥೆ ಮಾಡಿದೆ.
ಇದೇ ವೇಳೆ ತಮಿಳುನಾಡಿನಲ್ಲಿ ನೀಟ್ ಪರೀಕ್ಷೆ ಬರೆಯಲು ಸಿದ್ದತೆ ನಡೆಸುತ್ತಿದ್ದ ನಾಲ್ಕು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಒಂದು ವಾರದಲ್ಲಿ ಈ ನಾಲ್ಕು ವಿದ್ಯಾರ್ಥಿಗಳು ತಮ್ಮ ಜೀವವನ್ನು ಕಳೆದುಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾದ ಧರ್ಮಪುರಿಯ ಆದಿತ್ಯ ಕಳೆದ ಬಾರಿ ಕೂಡ ನೀಟ್ ಪರೀಕ್ಷೆ ಬರೆದಿದ್ದ. ಆದರೆ ತೇರ್ಗಡೆಹೊಂದಿರಲಿಲ್ಲ. ಈ ಬಾರಿ ಮತ್ತೆ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಆದಿತ್ಯ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.