Wednesday, November 30, 2022

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

Follow Us

newsics.com

ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ.

ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಅಂಬಾರಿಯಲ್ಲಿ ವಿರಾಜಮಾನಳಾಗುವ ನಾಡ ಅಧಿದೇವಯೆ ಚಾಮುಂಡೇಶ್ವರಿಗೆ ಸಿಎಂ ಬಸವರಾಜ‌ ಬೊಮ್ಮಾಯಿ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.

ಈ ಬಾರಿ ಅಭಿಮನ್ನು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಯನ್ನು ಹೊತ್ತು ಹೆಜ್ಜೆಹಾಕಲಿದ್ದಾನೆ. ಮೈಸೂರು ಅರಮನೆಯಿಂದ ಆರಂಭಗೊಳ್ಳುವಂತ ದಸರಾ ಜಂಬೂಸವಾರಿ ಸಂಜೆ 5.20ರವರೆಗೆ ಸಾಗಲಿದೆ. ಮೈಸೂರು ಅರಮನೆಯಿಂದ ಆರಂಭಗೊಂಡು, ಕೆ ಆರ್ ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಆರ್ ಎಂ ಸಿ, ತಿಕ ಕ್ಷ ಈಜ ನಗರ ಮಾರ್ಗವಾಗಿ ಸಾಗಿ, ಬನ್ನಿಮಂಟಪ ತಲುಪಿ, ಅಲ್ಲಿಂದ ಮೈಸೂರು ಅರಮನೆಗೆ ಮರಳಲಿದೆ.

ಜಂಬೂಸವಾರಿ ಮೆರವಣಿಗೆಯಲ್ಲಿ ನಂದಿಧ್ವಜ, ವೀರಗಾಸೆ, ನಾದಸ್ವರ, ನೌಪತ್, ನಿಸಾನೆ ಆನೆಗಳು, ಎನ್’ಸಿಸಿ, ಸ್ಕೌಟ್ಸ್, ಗೈಡ್ಸ್, ವಿವಿಧ ಪೊಲೀಸ್ ತುಕಡಿಗಳು, ನಾಡಿನ ಕಲೆ, ಸಂಸ್ಕೃತಿಯನ್ನು ಪ್ರತಿಂಬಿಸುವ 47 ಸ್ತಬ್ಧ ಚಿತ್ರಗಳು, 50 ಜನಪದ ಕಲಾತಂಡಗಳು ಸೇರಿದಂತೆ 100 ಕ್ಕೂ ಹೆಚ್ಚು ಕಲಾ ತಂಡಗಳು ಸಾಗಲಿವೆ.

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

ಭಾರತೀಯ ಸೇನೆಗೆ ಸೇರಿದ ಮೊದಲ ಮಹಿಳಾ ಬಾಕ್ಸರ್

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!