Saturday, April 17, 2021

ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಚಿಕಿತ್ಸೆ; ದರ ನಿಗದಿಪಡಿಸಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ . ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಚಿಕಿತ್ಸೆ ನೀಡಲು ಸರ್ಕಾರ ನಿರ್ಧರಿಸಿದೆ.
ಸರ್ಕಾರ ಕೋವಿಡ್ ಸೋಂಕಿಗೆ ಖಾಸಗಿ ಆಸ್ಪತ್ರೆಗಳಲ್ಲಿ ನೀಡುವ ಚಿಕಿತ್ಸೆಗೆ ದರ ನಿಗದಿಪಡಿಸಿ ಮಂಗಳವಾರ ಆದೇಶ ಹೊರಡಿಸಿದೆ. ಖಾಸಗಿ ಆಸ್ಪತ್ರೆಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ತಪ್ಪಿದಲ್ಲಿ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಸಿದೆ.
ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು ಶೇ.50ರಷ್ಟು ಹಾಸಿಗೆಗಳನ್ನು ಕೋವಿಡ್ ಸೋಂಕಿತ ರೋಗಿಗಳಿಗೆ ಮೀಸಲಿಡಬೇಕು. ಸರ್ಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ ಭಾಸ್ಕರ್ ತಮ್ಮ ಆದೇಶದಲ್ಲಿ ಸೂಚಿಸಿದ್ದಾರೆ.
ಸರ್ಕಾರ ಅಧೀನದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಜನರಲ್ ವಾರ್ಡ್‌ಗೆ ಪ್ರತಿ ದಿನಕ್ಕೆ 5200 ರೂ. ನೀಡಬೇಕಾಗಿದೆ. ಅದೇ ರೀತಿ ಎಚ್‌ಡಿಯು ವಾರ್ಡ್‌ ದಿನವೊಂದಕ್ಕೆ 7000 ರೂಪಾಯಿ, ಐಸಿಯುವಿಗೆ 8,500, ವೆಂಟಿಲೇಟರ್‌ ಇರುವ ಐಸಿಯುಗೆ 10,000 ನಿಗದಿ ಮಾಡಲಾಗಿದೆ.
ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಹೋಗುವ ಕೋವಿಡ್‌- 19 ರೋಗಿಗಳಿಗೆ ಜನರಲ್ ವಾರ್ಡ್‌ಗೆ ದಿನವೊಂದಕ್ಕೆ 10,000 ರೂ, ಎಚ್‌ಡಿಯುಗೆ 12,000 ರೂ., ಐಸಿಯುವಿಗೆ 15,000 ರೂ. ಹಾಗೂ ವೆಂಟಿಲೇಟರ್’ ಸಹಿತ ಐಸಿಯುಗೆ ದಿನಕ್ಕೆ 25,000 ರೂಪಾಯಿ ನಿಗದಿಪಡಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!