ಚೆನ್ನೈ: ನಟ ಕಮಲ್ ಹಾಸನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಇಂಡಿಯನ್ 2 ಚಿತ್ರೀಕರಣದ ವೇಳೆ ಸಂಭವಿಸಿದ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಚೆನ್ನೈನಲ್ಲಿರುವ ಇವಿಪಿ ಫಿಲ್ಮ್ ಸಿಟಿಯಲ್ಲಿ ಬುಧವಾರ ರಾತ್ರಿ ಚಿತ್ರೀಕರಣಕ್ಕೆ ಬಳಸಲಾಗುತ್ತಿದ್ದ ಕ್ರೇನ್ ಉರುಳಿಬಿದ್ದು ಈ ದುರಂತ ಸಂಭವಿಸಿದೆ. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇಂಡಿಯನ್ 2 ಚಿತ್ರದ ಚಿತ್ರೀಕರಣಕ್ಕಾಗಿ ಸೆಟ್ ತಯಾರಿಸಲು ಕ್ರೇನ್ ಬಳಸಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕ್ರೇನ್ ಉರುಳಿಬಿದ್ದಿದೆ. ಮೃತರನ್ನು ಸಿಬ್ಬಂದಿಗೆ ಆಹಾರ ಸರಬರಾಜು ಮಾಡುತ್ತಿದ್ದ ಮಧು (29), ಚಂದ್ರನ್ (60) ಮತ್ತು ಸಹಾಯಕ ನಿರ್ದೇಶಕ ಕೃಷ್ಣಾ (34) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ನಿರ್ದೇಶಕ ಶಂಕರ್ ಮತ್ತು ಚಿತ್ರ ನಿರ್ಮಾಪಕರು ದೌಡಾಯಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇಂಡಿಯನ್ 2 ಶೂಟಿಂಗ್ ವೇಳೆ ಕ್ರೇನ್ ಉರುಳಿ ಮೂವರ ಸಾವು
Follow Us