newsics.com
ಅಹ್ಮದಾಬಾದ್: ಐಪಿಎಲ್ ಕ್ವಾಲಿಫೈಯರ್ 2 ರಲ್ಲಿ ಫೈನಲ್ ಪ್ರವೇಶಕ್ಕಾಗಿ ‘ರಾಯಲ್ ‘ ಗಳ ನಡುವೆ ನಡೆದ ಸೆಣಸಾಟದಲ್ಲಿ 7ವಿಕೆಟ್ ಗಳ ಸೋಲನ್ನು ಅನುಭವಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಮ್ಮೆ ಐಪಿಎಲ್ ಕಪ್ ಆಸೆಯನ್ನು ಪೂರೈಸಿಕೊಳ್ಳುವ ಅವಕಾಶವನ್ನು ಕೈಚೆಲ್ಲಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಫಾಫ್ ಪಡೆ 20 ಓವರ್ ಗಳಲ್ಲಿ 8 ವಿಕೆಟ್ ಗೆ 157 ರನ್ ಕಲೆಹಾಕಿತ್ತು. ಈ ಸಾಧಾರಣ ಮೊತ್ತವನ್ನು ಬೆನ್ನೆಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ 18.1 ಓವರ್ ಗಳಲ್ಲಿ 3 ವಿಕೆಟ್ ಗೆ 161 ರನ್ ಪೇರಿಸಿ 7 ವಿಕೆಟ್ ಜಯ ಸಾಧಿಸುವ ಮೂಲಕ ಫೈನಲ್ಸ್ ಗೆ ಲಗ್ಗೆಯಿಟ್ಟಿದೆ.
ಈ ಸೋಲಿನ ಮೂಲಕ RCB ಮತ್ತೊಮ್ಮೆ ತನ್ನ ಅಭಿಮಾನಿಗಳಿಗೆ ಭಾರೀ ನಿರಾಶೆಯನ್ನು ಉಂಟು ಮಾಡಿದೆ.
ಮೇ 29ಕ್ಕೆ ನಡೆಯಲಿರುವ ಐಪಿಎಲ್ 2022 ಫೈನಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್, ಗುಜರಾತ್ ಟೈಟಾನ್ಸ್ ಅನ್ನು ಎದುರಿಸಲಿದೆ.