Saturday, April 17, 2021

ಆಲಿ ಭಾಗ್ ಗೆ ಅಪ್ಪಳಿಸಿದ ನಿಸರ್ಗ ಚಂಡಮಾರುತ

ಮುಂಬೈ : ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ನಿಸರ್ಗ ಚಂಡಮಾರುತ ಮಹಾರಾಷ್ಟ್ರದ ಆಲಿ ಭಾಗ್ ನಲ್ಲಿ ಅಪ್ಪಳಿಸಿದೆ. ಚಂಡಮಾರುತದ ಪರಿಣಾಮ ಆಲಿ ಭಾಗ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಆಲಿ ಭಾಗ್ ಸಮುದ್ರ ತೀರದಲ್ಲಿ 62 ಗ್ರಾಮಗಳಿದ್ದು  ಗ್ರಾಮಸ್ಥರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಜನರು ಮನೆಯಿಂದ ಹೊರಗೆ ಬಾರದಂತೆ  ನಿರ್ಬಂಧ ವಿಧಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಮೂರು ತಂಡಗಳನ್ನು ಆಲಿ ಭಾಗ್ ನಲ್ಲಿ ನಿಯೋಜಿಸಲಾಗಿದೆ. ರಾಯಗಢ ಜಿಲ್ಲೆಯ ಇತರ ಪ್ರದೇಶಗಳಲ್ಲಿ ಕೂಡ ಮುನ್ನೆಚ್ಚರಿಕಾ ವಹಿಸಲಾಗಿದೆ. ಗಂಟೆಗೆ 90ರಿಂದ 100 ಕೀಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ, ಗುಜರಾತ್ ನ  ವಲ್ಸಾಡ್  ಸೇರಿದಂತೆ ಕರಾವಳಿ ತೀರ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!