ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿ ಅಶ್ವತ್ನಾರಾಯಣ್ ಕೊರೋನಾ ಸೋಂಕು ಧೃಡಪಟ್ಟಿದೆ. ಸ್ವತಃ ಡಿಸಿಎಂ ಅಶ್ವತ್ ನಾರಾಯಣ್ ಈ ವಿಚಾರವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
ವಿಧಾನಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಅಶ್ವತ್ ನಾರಾಯಣ್ ಕೊರೋನಾ ಸೋಂಕಿನ ಪರೀಕ್ಷೆಗೆ ಒಳಗಾಗಿದ್ದರು. ಕೋವಿಡ್-19 ಟೆಸ್ಟ್ ಪಾಸಿಟಿವ್ ಬಂದಿದೆ.
ಅಧಿವೇಶನ ಹಿನ್ನೆಲೆಯಲ್ಲಿ ನಾನು ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದು, ರಿಸಲ್ಟ್ ಪಾಸಿಟಿವ್ ಬಂದಿದೆ. ಆದರೆ ನನಗೆ ಯಾವುದೇ ರೋಗ ಲಕ್ಷಣಗಳು ಇಲ್ಲದೇ ಇರೋದರಿಂದ ನಾನು ಮನೆಯಲ್ಲೇ ಪ್ರತ್ಯೇಕವಾಗಿದ್ದು ವಿಶ್ರಾಂತಿ ಪಡೆಯುತ್ತಿದ್ದೇನೆ. ಇತ್ತೀಚಿಗೆ ನನ್ನ ಸಂಪರ್ಕಕ್ಕೆ ಬಂದವರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದಿದ್ದಾರೆ. ರಾಜ್ಯದಲ್ಲಿ ಪ್ರತಿನಿತ್ಯ ಕೊರೋನಾ ಪೀಡಿತರ ಸಂಖ್ಯೆ ಏರುತ್ತಲೇ ಇದ್ದು, ರಾಜ್ಯದ ಬಹುತೇಕ ರಾಜಕಾರಣಿಗಳು ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡಿದ್ದಾರೆ.
ಡಿಸಿಎಂ ಅಶ್ವತ್ಥನಾರಾಯಣ್ ಗೆ ಕೊರೋನಾ ಸೋಂಕು
Follow Us