Tuesday, April 13, 2021

ಚೀನಾ ಗಡಿಯುದ್ದಕ್ಕೂ 3 ಸಾವಿರ ITBP ಸೈನಿಕರ ನಿಯೋಜನೆ

ನವದೆಹಲಿ: ಗಾಲ್ವಾನ್ ಕಣಿವೆ ಸೇರಿದಂತೆ ಚೀನಾ ಗಡಿಯುದ್ದಕ್ಕೂ 3 ಸಾವಿರ ಐಟಿಬಿಪಿ ಸೈನಿಕರನ್ನು ಭಾರತ ರವಾನಿಸಿದೆ.
ಈ ಮೂಲಕ ತಂಟೆಕೋರ ಚೀನಾಗೆ ಭಾರತ ಸೆಡ್ಡು ಹೊಡೆದಿದೆ. ಸಂಘರ್ಷದ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ರಸ್ತೆ ಕಾಮಗಾರಿಗಳನ್ನು ಮತ್ತೆ ಆರಂಭಿಸಿದ್ದು, ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮುಂದಾಗಿದೆ.
ಈ ಕುರಿತು ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿದ್ದು, ಗಾಲ್ವಾನ್ ಕಣಿವೆ ಸೇರಿದಂತೆ ದೇಶದ ಗಡಿಯುದ್ದಕ್ಕೂ ಕಾನೂನು ಮತ್ತು ಸುವ್ಯವಸ್ಥೆ ರಕ್ಷಣೆಗಾಗಿ ದೊಡ್ಡಮಟ್ಟದ ಸೇನಾ ತುಕಡಿಗಳನ್ನು ರವಾನಿಸಲಾಗಿದೆ. ಎಲ್ ಎಸಿ ಗೆ ಮತ್ತು ಜಮ್ಮು ಮತ್ತು ಕಾಶ್ಮೀರದಿಂದ ಸೈನಿಕರನ್ನು ರವಾನೆ ಮಾಡಲಾಗಿದೆ ಎಂದು ತಿಳಿಸಿದೆ.
ಸೇನಾ ಮೂಲಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದಿಂದ ಸೇನೆಯ 15 ಕಂಪನಿಗಳನ್ನು ಲಡಾಖ್’ಗೆ ರವಾನೆ ಮಾಡಲಾಗಿದ್ದು, ಹೆಚ್ಚುವರಿ 30 ಕಂಪನಿಗಳನ್ನು ಎಲ್’ಎಸಿ ಉದ್ದಕ್ಕೂ ನಿಯೋಜಿಸಲಾಗಿದೆ. ಪ್ರತಿಯೊಂದು ಕಂಪನಿಯಲ್ಲೂ ಸುಮಾರು 100ರಿಂದ 120 ಸೈನಿಕರಿರಲಿದ್ದಾರೆ. ಒಟ್ಟು 7 ಸಾವಿರ ಸೈನಿಕರನ್ನು ನಿಯೋಜಿಸುವ ಕುರಿತು ಸೇನೆ ಚಿಂತನೆಯಲ್ಲಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!