Saturday, April 17, 2021

ಶಬರಿಮಲೆ ಅಯ್ಯಪ್ಪ ದರ್ಶನ- ಭಕ್ತರ ಪ್ರವೇಶ ರದ್ದು

ಕೊಚ್ಚಿ: ಕೇರಳದ ಪ್ರಸಿದ್ದ ಶಬರಿಮಲೆ ದೇವಸ್ಥಾನದಲ್ಲಿ ಮಲೆಯಾಳಂ ತಿಂಗಳು ಮಿಥುನ ಮಾಸದ ಪೂಜೆ ಸಂದರ್ಭದಲ್ಲಿ  ಭಕ್ತರಿಗೆ ಪ್ರವೇಶ ನೀಡದಿರಲು ನಿರ್ಧರಿಸಲಾಗಿದೆ. ಈ ಮೊದಲು ಜೂನ್ 14ರಂದು ಶಬರಿಮಲೆಯಲ್ಲಿ ಭಕ್ತರಿಗೆ ಅವಕಾಶ ನೀಡುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿತ್ತು. ಇದಕ್ಕೆ ದೇವಸ್ಥಾನದ ಮುಖ್ಯ ಅರ್ಚಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಿದೆ. ಸದ್ಯಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶ ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದೆ. ಇಂದು ನಡೆದ ಮುಖ್ಯ ತಂತ್ರಿ, ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿ ಮತ್ತು ಸರ್ಕಾರದ ಪ್ರತಿನಿಧಿಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಯ್ಯಪ್ಪ ದೇವಸ್ಥಾನದ  ವಾರ್ಷಿಕ ಜಾತ್ರೆಯನ್ನು ಕೂಡ ರದ್ದುಪಡಿಸಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!