Monday, November 29, 2021

ಐಪಿಎಲ್ ಟ್ರೋಫಿ‌ ಗೆದ್ದ ಧೋನಿ ಪಡೆ

Follow Us

newsics.com

ದುಬೈ: ಕಳೆದ ಬಾರಿ ಲೀಗ್‍ನಲ್ಲೇ ಹೊರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ನಡೆದ ಫೈನಲ್‍ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 27 ರನ್ ಗಳಿಂದ ಜಯ ಗಳಿಸಿದ ಚೆನ್ನೈ 4ನೇ ಬಾರಿ ಟ್ರೋಫಿಯನ್ನು ಗೆದ್ದುಕೊಂಡಿದೆ. ಈ ಮೂಲಕ ಮತ್ತೊಮ್ಮೆ ತಾನೊಬ್ಬ ಯಶಸ್ವಿ ನಾಯಕ ಎಂಬುದನ್ನು ಧೋನಿ ಸಾಬೀತುಪಡಿಸಿದ್ದಾರೆ.

ಐಪಿಎಲ್ ಇತಿಹಾಸದಲ್ಲೇ ನಾಲ್ಕನೇ ಬಾರಿಗೆ ಪ್ರಶಸ್ತಿ ಗೆದ್ದ ಸಾಧನೆ ಮಾಡಿದೆ. ಅತ್ತ ಕೋಲ್ಕತ್ತ ತಂಡದ ಮೂರನೇ ಐಪಿಎಲ್ ಟ್ರೋಫಿ ಕನಸು ಭಗ್ನಗೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟ ಚೆನ್ನೈ ತಂಡವವು ಫಫ್ ಡುಪ್ಲೆಸಿ (86) ಬಿರುಸಿನ ಅರ್ಧಶತಕ ನೆರವಿನಿಂದ ಮೂರು ವಿಕೆಟ್ ನಷ್ಟಕ್ಕೆ 192 ರನ್‌ಗಳ ಬೃಹತ್ ಮೊತ್ತ ಸೇರಿಸಿತ್ತು.

ಋತುರಾಜ್ ಗಾಯಕವಾಡ್ (32), ರಾಬಿನ್ ಉತ್ತಪ್ಪ (31) ಹಾಗೂ ಮೊಯಿನ್ ಅಲಿ (37*) ಜೊತೆಗೆ ತಲಾ ಅರ್ಧ ಶತಕಗಳ ಜೊತೆಯಾಟ ಕಟ್ಟಿದ ಡುಪ್ಲೆಸಿ 100ನೇ ಐಪಿಎಲ್ ಪಂದ್ಯವನ್ನು ಸ್ಮರಣೀಯವಾಗಿಸಿದರು.

ಗುರಿ ಬೆನ್ನತ್ತಿದ ಕೋಲ್ಕತ್ತ, ಆರಂಭಿಕರಾದ ವೆಂಕಟೇಶ್ ಅಯ್ಯರ್ (50) ಹಾಗೂ ಶುಭಮನ್ ಗಿಲ್ (51) ಆಕರ್ಷಕ ಅರ್ಧಶತಕಗಳ ಹೊರತಾಗಿಯೂ ಒಂಬತ್ತು ವಿಕೆಟ್ ನಷ್ಟಕ್ಕೆ 164 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಹೀಗಾಗಿ ಗಿಲ್-ಅಯ್ಯರ್ ಹೋರಾಟ ವ್ಯರ್ಥವೆನಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

newsics.com ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಇಬ್ಬರ ಶವಸಂಸ್ಕಾರ ಮಾಡುವುದನ್ನೇ ಮರೆತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲ, 15 ತಿಂಗಳ ಬಳಿಕ ಎರಡು ಶವಗಳನ್ನು ಹೊರಕ್ಕೆ ತಂದ...

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ದೇವಾಲಯದ ಹತ್ತಿರವೇ ಮಸೀದಿ ಇದ್ದು,...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...
- Advertisement -
error: Content is protected !!