Wednesday, November 30, 2022

ಬೇಡಿಕೆಗೆ ಸ್ಪಂದಿಸದ ಜಿಲ್ಲಾಡಳಿತ: ಸಾಲುಮರದ ವೀರಾಚಾರಿ ಆತ್ಮಹತ್ಯೆ, ಗ್ರಾಮದಲ್ಲಿ ಬಿಗು ಸ್ಥಿತಿ

Follow Us

newsics.com

ದಾವಣಗೆರೆ: ಸಾಲುಮರದ ವೀರಾಚಾರಿ ಖ್ಯಾತಿಯ ಪರಿಸರ ಪ್ರೇಮಿ ಮಿಟ್ಲಕಟ್ಟೆ ವೀರಾಚಾರಿ(70) ಸೋಮವಾರ ತಡರಾತ್ರಿ ನೇಣಿಗೆ ಶರಣಾಗಿದ್ದಾರೆ.

ಮಿಟ್ಲಕಟ್ಟೆ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಅಕ್ಕಿ ಬಡವರಿಗೆ ಸಮರ್ಪಕ ರೀತಿಯಲ್ಲಿ ವಿತರಣೆಯಾಗುತ್ತಿಲ್ಲ ಎಂದು ವೀರಾಚಾರಿ ಅವರು ಕಳೆದ ಒಂದು ವರ್ಷದಿಂದ ಹೋರಾಟ ನಡೆಸಿದ್ದರು. ನ್ಯಾಯಾಲಯದಲ್ಲಿ, ಜನರಲ್ಲಿ, ದೇವರಲ್ಲಿ ನ್ಯಾಯ ಸಿಗದಿದ್ದರೆ ನೇಣಿಗೆ ಶರಣಾಗುವುದಾಗಿ ವಾಗ್ದಾನ ಮಾಡಿದ್ದರು. ವಾಗ್ದಾನದಂತೆ ಸೋಮವಾರ ರಾತ್ರಿ 2 ಗಂಟೆಗೆ ಗ್ರಾಮದೊಳಗಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೋಮವಾರ ಕೂಡ ನ್ಯಾಯಬೆಲೆ ಅಂಗಡಿ‌ಯ ವಿಚಾರವಾಗಿ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನ್ಯಾಯಬೆಲೆ ಅಂಗಡಿ ರದ್ದು ಮಾಡಬೇಕೇ ಬೇಡವೇ ಎಂಬ ಬಗ್ಗೆ ಚರ್ಚೆ ನಡೆದಿತ್ತು.

ನ್ಯಾಯಬೆಲೆ ಅಂಗಡಿಯಲ್ಲಿ ಬಡವರಿಗೆ ಅಕ್ಕಿ ವಿತರಣೆ ಸಮರ್ಪಕಗೊಳಿಸದ ಜಿಲ್ಲಾಡಳಿತವೇ ವೀರಾಚಾರಿ ಅವರ ಸಾವಿಗೆ ಕಾರಣವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಗ್ರಾಮದ ಮಾರ್ಗಗಳನ್ನು‌ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಗ್ರಾಮದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ.

ರಾಜ್ಯ ಪ್ರಶಸ್ತಿ ಪುರಸ್ಕೃತ ವೀರಾಚಾರಿ 3,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದರು. ದಾವಣಗೆರೆ ಮತ್ತು ಹರಿಹರ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಲುಮರ ನೆಟ್ಟು ಪೋಷಿಸುತ್ತಿದ್ದ ಅವರ ಪರಿಸರ ಕಾಳಜಿಗೆ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು

ಸ್ನಾನದ ವಿಡಿಯೋ ಲೀಕ್, ಬಾತ್ ರೂಂ ಗೆ ಹೋಗಲು ಹಿಂಜರಿಯುತ್ತಿರುವ ವಿದ್ಯಾರ್ಥಿನಿಯರು

ಒಟ್ಟಿಗೆ ಇಬ್ಬರು ಹುಡುಗರ ಜತೆ ಡೇಟಿಂಗ್ ಮಾಡಬೇಡ: ಪುತ್ರಿಗೆ ಗೌರಿ ಖಾನ್ ಸಲಹೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!