ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಸೋನಿಯಾ ಗಾಂಧಿ ಅಂತಿಮಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ನಾಯಕನನ್ನು ನೇಮಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕರ್ನಾಟಕದ ಪ್ರಮುಖ ಮುಖಂಡರನ್ನು ಕರೆದು ಚರ್ಚೆ ನಡೆಸಿದ್ದು, ಅಂತಿಮ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಹುತೇಕ ಡಿ.ಕೆ.ಶಿವಕುಮಾರ್ ಹೆಸರು ಅಂತಿಮಗೊಳಿಸಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಡಿಕೆಶಿ ದೆಹಲಿಗೆ ಬರುವುದು ಬೇಡ ಎಂದು ಎಐಸಿಸಿ ಹಿರಿಯ ನಾಯಕರೊಬ್ಬರು ಡಿಕೆಶಿಗೆ ಸ್ಪಷ್ಟಪಡಿಸಿದ್ದಾರೆ.
ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಡಿಕೆಶಿ ಇದೀಗ ದೆಹಲಿ ಪ್ರವಾಸವನ್ನು ದಿಢೀರ್ ರದ್ದು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷಗಿರಿ?
Follow Us