Saturday, April 17, 2021

ವಿದ್ಯಾರ್ಥಿಗಳಲ್ಲಿ ಭಯ ತುಂಬದಿರಿ, ಆತ್ಮವಿಶ್ವಾಸ ಹೆಚ್ಚಿಸಿ: ಪ್ರಧಾನಿ ಮೋದಿ

newsics.com
ನವದೆಹಲಿ: ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು. ಅವರಲ್ಲಿ ಯಾವುದೇ ಕಾರಣಕ್ಕೂ ಭಯ ತುಂಬಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ‌ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ವರ್ಚುಯಲ್  ‘ಪರೀಕ್ಷಾ ಪೇ ಚರ್ಚಾ’ ಸಂವಾದದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜೀವನ ಎನ್ನುವುದು ತುಂಬಾ ದೊಡ್ಡದು. ಅದರಲ್ಲಿ ಪರೀಕ್ಷೆ ತುಂಬಾ ಚಿಕ್ಕ ಭಾಗ ಎಂದಿರುವ ಮೋದಿ, ಪೋಷಕರು, ಶಿಕ್ಷಕರು
ಉತ್ತಮ ಪುಸ್ತಕಗಳು, ಸಿನಿಮಾ ಹಾಗೂ ಉತ್ತಮ ಕಥೆಗಳ ಬಗ್ಗೆ ಹೆಚ್ಚಿನ ಮಹತ್ವ ನೀಡಿ ಎಂದರು.
ಪರೀಕ್ಷೆಯಲ್ಲಿ ವಿಫಲವಾದರೆ ಅದು ಜೀವನದ ಸೋಲು ಅಲ್ಲ ಎಂದು ಮೋದಿ ಕಿವಿಮಾತು ಹೇಳಿದ್ದಾರೆ. ವಿದ್ಯಾರ್ಥಿಗಳಿಗೆ ಒತ್ತಡ ಮುಕ್ತ ಪರೀಕ್ಷೆಗಳಲ್ಲಿ ಭಾಗಿಯಾಗುವಂತೆ ಪಾಲಕರು ಹಾಗೂ ಶಿಕ್ಷಕರು ಉತ್ತೇಜನ ನೀಡಬೇಕು ಎಂದ  ಪ್ರಧಾನಿ‌ ಮೋದಿ, ಪರೀಕ್ಷೆ ಬಗ್ಗೆ ಹೆಚ್ಚಾಗಿ ಆಲೋಚನೆ ಮಾಡುವುದನ್ನು ಬಿಡಬೇಕು. ಇದೇ ಜೀವನದ ಕೊನೆಯ ಪರೀಕ್ಷೆ ಅಲ್ಲ ಎಂದರು.
ಅಭ್ಯಾಸ ಮಾಡಲು ಎರಡು ಗಂಟೆ ಇದ್ದರೆ ಒಂದೇ ವಿಷಯ ಓದುವ ಬದಲು ಪ್ರತಿ  ವಿಷಯ ಓದಿ. ಆರಂಭದಲ್ಲಿ ಕಷ್ಟಕರವಾದ ಪ್ರಶ್ನೆ ತೆಗೆದುಕೊಳ್ಳಿ. ನಂತರ ಸರಳ ಹಾಗೂ ಸುಲಭ ಪ್ರಶ್ನೆಗಳಿಗೆ ಉತ್ತರಿಸಬಹುದು. ನಾನು ಬೆಳಗ್ಗೆಯಿಂದ ಕಠಿಣ ಕೆಲಸಗಳ ಜತೆ ದಿನ ಆರಂಭಿಸುತ್ತೇನೆ ಎಂದರು.
ಕರ್ನಾಟಕದ ಕುಂದಾಪುರದ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಸೇರಿ ರಾಜ್ಯದ ಇಬ್ಬರು ವಿದ್ಯಾರ್ಥಿಗಳು ಈ ಸಂವಾದದಲ್ಲಿ ಪಾಲ್ಗೊಂಡಿದ್ದರು.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!