ಧಾರವಾಡ: ‘ನನ್ನ ಬರವಣಿಗೆ ಕಾಲ ಮುಗಿಯಿತು ಅನಿಸುತ್ತಿದೆ. ಮತ್ತೆ ಬರೆಯುತ್ತೀನೋ ಇಲ್ಲವೋ ಗೊತ್ತಿಲ್ಲ…’
– ಹೀಗೆಂದು ವಿಷಾದದಿಂದ ಹಿರಿಯ ಕಾದಂಬರಿಕಾರ ಡಾ. ಎಸ್.ಎಲ್.ಭೈರಪ್ಪ ಹೇಳಿದಾಗ ಅಲ್ಲಿದ್ದವರಿಗೆ ಆಘಾತ.
ಡಾ. ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಶುಕ್ರವಾರ ಆಯೋಜಿಸಿದ್ದ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ಮೊದಲು ಆಯೋಜಿಸಿದ್ದ ಸಾಹಿತ್ಯ ಸಂವಾದದಲ್ಲಿ ಮಾತನಾಡಿ, ‘ಉತ್ತರಕಾಂಡ ಕಾದಂಬರಿ ನಂತರ ನಾನು ಏನನ್ನೂ ಬರೆದಿಲ್ಲ. ಹೊಸ ಅಲೋಚನೆಗಳು ಹೊಳೆದಿಲ್ಲ. ಇದಕ್ಕೆ ವಯಸ್ಸೂ ಕಾರಣ’ ಎಂದರು.
ನಾನಿನ್ನು ಬರೆಯುತ್ತೇನೋ ಇಲ್ಲವೋ ಗೊತ್ತಿಲ್ಲ; ಡಾ.ಎಸ್ಸೆಲ್ ಭೈರಪ್ಪ
Follow Us