newsics.com
ನವದೆಹಲಿ; ಎನ್ಡಿಎ ಪಕ್ಷದ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ದ್ರೌಪದಿ ಮುದ್ದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಜುಲೈ 18ರಂದು ರಾಷ್ಟ್ರಪತಿ ಆಯ್ಕೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ವೇಳೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಉಪಸ್ಥಿತರಿದ್ದರು. ಒಡಿಶಾದ ಸಂತಾಲ್ ಬುಡಕಟ್ಟಿಗೆ ಸೇರಿದ ದ್ರೌಪದಿ ಮುರ್ಮು ಅವರು ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಕಣಕ್ಕಿಳಿದಿದ್ದಾರೆ.