newsics.com
ಮುಂಬೈ: ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದು ಟೇಕಾಫ್ ಆದ ಅರ್ಧ ಗಂಟೆಯಲ್ಲೇ ತುರ್ತು ಭೂಸ್ಪರ್ಶ ಮಾಡಿದೆ.
ಟಾಟಾ ಗ್ರೂಪ್ ನಡೆಸುತ್ತಿರುವ ಏರ್ ಇಂಡಿಯಾದ A320neo ವಿಮಾನದ ಎಂಜಿನ್‌ನ ದೋಷದಿಂದ ಆಗಸದಲ್ಲೇ ವಿಮಾನ ಸ್ಥಗಿತಗೊಂಡು ಕೆಲ ನಿಮಿಷದಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಗುರುವಾರ ಈ ಘಟನೆ ನಡೆದಿದೆ ಎನ್ನಲಾಗಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರನ್ನು ಬೇರೆ ವಿಮಾನದ ಮೂಲಕ ಬೆಂಗಳೂರಿಗೆ ಕಳುಹಿಸಲಾಯಿತು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.
ವಾಯುಯಾನ ನಿಯಂತ್ರಕ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ಈ ಘಟನೆ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ವರದಿಯಾಗಿದೆ.
ಬಳ್ಳಾರಿ, ಚಿತ್ರದುರ್ಗ, ತುಮಕೂರಿನಿಂದ ಅದಿರು ಸಾಗಣೆಗೆ ಸುಪ್ರೀಂ ಸಮ್ಮತಿ
ಮಾತುಗಾರರ ಶೋಧಕ್ಕೆ ಮುಂದಾದ ಕಾಂಗ್ರೆಸ್‌ನಿಂದ ಭಾಷಣ ಸ್ಪರ್ಧೆ: ವಿಜೇತರಿಗೆ ಐಫೋನ್ ಬಹುಮಾನ