Saturday, April 17, 2021

ಅಂತಿಮ ವರ್ಷದ ಡಿಪ್ಲೊಮಾ, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿನ ಡಿಪ್ಲೊಮಾ 1 ಮತ್ತು ಎರಡನೇ ಸೆಮಿಸ್ಟರ್ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗಿದೆ. ಅಲ್ಲದೇ ಇಂಜಿನಿಯರಿಂಗ್ ನ 3ನೇ ವರ್ಷದ ಪರೀಕ್ಷೆಯನ್ನು ಕೂಡ ರದ್ದು ಪಡಿಸಿ, ಪರೀಕ್ಷೆ ಇಲ್ಲದೇ ಹಿಂದಿನ ವರ್ಷದ ಅಂಕಗಳ ಆಧಾರ ಮೇಲೆ ಪಾಸ್ ಮಾಡಲಾಗುತ್ತದೆ. ಆದರೆ ಅಂತಿಮ ವರ್ಷದ ಪರೀಕ್ಷೆಗಳು ಸೆಪ್ಟೆಂಬರ್’ನಲ್ಲಿ ನಡೆಯಲಿವೆ.
ಉನ್ನತ ಶಿಕ್ಷಣ ಸಚಿವ, ಹಾಗೂ ಡಿ ಸಿಎಂ ಡಾ.ಅಶ್ವತ್ಥ ನಾರಾಯಣ್‌ ಈ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿನ ಡಿಪ್ಲೋಮಾ ವಿದ್ಯಾರ್ಥಿಗಳ 1 ಮತ್ತು 2ನೇ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದು ಪಡಿಸಲಾಗಿದೆ. ಅಂತಿಮ ವರ್ಷದ ಡಿಪ್ಲೊಮಾ ಪರೀಕ್ಷೆಗಳನ್ನು ಸೆಪ್ಟಂಬರ್ ನಲ್ಲಿ ನಡೆಸಲಾಗುತ್ತದೆ. ಇಂಜಿನಿಯರಿಂಗ್ ನ 3ನೇ ವರ್ಷದ ವರೆಗಿನ ಎಲ್ಲಾ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಕೊನೆಯ ಸೆಮಿಸ್ಟರ್ ಪರೀಕ್ಷೆ ಬರೆಯುವುದು ಕಡ್ಡಾಯ. ಈ ಪರೀಕ್ಷೆಯನ್ನು ಸೆಪ್ಟಂಬರ್ ನಲ್ಲಿ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಅಂತಿಮ ವರ್ಷದ ಪಿಜಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಪರೀಕ್ಷೆಯನ್ನು ನಡೆಸಬಹುದಾಗಿದೆ. ಆದರೆ, ಹೇಗೆ ಪರೀಕ್ಷೆ ನಡೆಸಬೇಕು ಎನ್ನುವುದು ಆಯಾ ವಿವಿಗಳಿಗೆ ಬಿಟ್ಟ ವಿಚಾರವಾಗಿದ್ದು, ಆಫ್‌ ಲೈನ್‌ ಅಥವಾ ಆನ್‌ ಲೈನ್‌ ಮೂಲಕ ನಡೆಸಬಹುದಾಗಿದೆ ಎಂದು ಹೇಳಿದರು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!