ಕರಾಚಿ: ಪಾಕಿಸ್ತಾನದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ಪ್ರಧಾನಿ ಇಮ್ರಾನ್ ಖಾನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಮರುಭೂಮಿ ಮಿಡತೆಗಳ ಕಾಟದಿಂದಾಗಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ನಲುಗಿದೆ. ಭಾರೀ ಪ್ರಮಾಣದ ಬೆಳೆ ಹಾನಿಯನ್ನು ಉಂಟು ಮಾಡಿರುವ ಮಿಡತೆಗಳನ್ನು ನಾಶ ಮಾಡಲು ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಇಮ್ರಾನ್ ಹೇಳಿದ್ದಾರೆ.
ಮಿಡತೆ ಹಾವಳಿ ನಿಯಂತ್ರಿಸಿ ಬೆಳೆಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ಇಮ್ರಾನ್ ಖಾನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಿಡತೆಗಳ ನಾಶಕ್ಕೆ 300 ಕೋಟಿ ರೂ. ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.
ಮಿತಿಮೀರಿದ ಮಿಡತೆ ಹಾವಳಿ; ಪಾಕ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ
Follow Us