Wednesday, July 6, 2022

ಅಬಕಾರಿ ಸುಂಕ ಕಡಿತ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

Follow Us

newsics.com
ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ.
ಪ್ರತಿ ಲೀಟರ್‌ ಪೆಟ್ರೋಲ್‌ ಮೇಲೆ 8 ರೂ., ಡೀಸೆಲ್‌ ಮೇಲೆ 6 ರೂ. ಕಡಿತಗೊಳಿಸಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ‌ ಮಾಹಿತಿ ಹಂಚಿಕೊಂಡಿದ್ದಾರೆ.
ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 8 ರೂ. ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 6 ರೂ.ಗಳಷ್ಟು ಕಡಿಮೆ ಮಾಡುತ್ತಿದ್ದೇವೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಈ ವರ್ಷ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್‌ಗೆ (12 ಸಿಲಿಂಡರ್‌ಗಳವರೆಗೆ) 200 ರೂ.ಗಳ ಸಬ್ಸಿಡಿಯನ್ನು ನಾವು ನೀಡಲಿದ್ದೇವೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

ಸದ್ಯದಲ್ಲೇ ಸ್ಪ್ಯಾಮ್ ಕರೆಗಳಿಂದ ಸಿಗಲಿದೆ ಮುಕ್ತಿ

ಶಾಪಿಂಗ್ ಮಾಲ್ ನ ಮಹಡಿಯಿಂದ ಬಿದ್ದ ಯುವತಿ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಐಎಎಸ್ ಅಧಿಕಾರಿಯ ಬಂಧನ

newsics.com ಜಾರ್ಖಂಡ್‌: ಜಾರ್ಖಂಡ್‌ನಲ್ಲಿ ಐಐಟಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖುಂಟಿ ಉಪವಿಭಾಗಾಧಿಕಾರಿ ಸಯ್ಯದ್ ರಿಯಾಜ್ ಅಹಮದ್ ಅವರನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು...

ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

newsics.com ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲೆಗೆ ರಜೆ ಘೋಷಿಸಲಾಗಿದೆ. ಸಾಗರ, ಹೊಸನಗರ ಮತ್ತು...

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು...
- Advertisement -
error: Content is protected !!