newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ನ್ಯಾಯಾಲಯಗಳಿಗೆ ನವೆಂಬರ್ 29 ರವರೆಗೆ ಕಾಲಮಿತಿ ನಿಯಮಿಗಳ ಅನ್ವಯ ರಜೆ ವಿಸ್ತರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಹೈಕೋರ್ಟ್ ನ ಈ ಆದೇಶ ರಾಜ್ಯ ಹೈಕೋರ್ಟ್ ಪ್ರಧಾನ ಪೀಠ, ಕಲಬುರಗಿ ಮತ್ತು ಧಾರವಾಡ ಪೀಠ, ಎಲ್ಲಾ ಜಿಲ್ಲಾ ನ್ಯಾಯಾಲಯಗಳು, ವಿಚಾರಣಾ ನ್ಯಾಯಾಲಯಗಳು, ಕೌಟುಂಬಿಕ ನ್ಯಾಯಾಲಯಗಳು, ಕಾರ್ಮಿಕ ನ್ಯಾಯಾಲಯಗಳು ಹಾಗೂ ಕೈಗಾರಿಕ ನ್ಯಾಯಾಧೀಕರಣಗಳಿಗೆ ಅನ್ವಯವಾಗಲಿದೆ.
ರಾಜ್ಯದಲ್ಲಿ ಕೊರೋನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಕ್ಷಿದಾರರು ನ್ಯಾಯಾಲಯಕ್ಕೆ ತೆರಳಲು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಆದೇಶ ಹೊರಡಿಸಿದ್ದು, ಎಸ್ ಒಪಿ ಮಾರ್ಗಸೂಚಿಗಳ ಅನುಸಾರ ಸೀಮಿತ ಕಾರ್ಯಾಚರಣೆ ನಡೆಸುತ್ತಿರುವ ನ್ಯಾಯಾಲಯಗಳ ಮಧ್ಯಂತರ ಆದೇಶಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.