Monday, September 27, 2021

ರಾಜ್ಯದಲ್ಲಿ ಜು.31ರವರೆಗೂ ವ್ಯಾಪಕ‌ ಮಳೆ ಸಾಧ್ಯತೆ

Follow Us

newsics.com

ಬೆಂಗಳೂರು: ರಾಜ್ಯದ ಹಲವೆಡೆ ಜುಲೈ 31ರವರೆಗೂ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಸಾಧ್ಯತೆಗಳಿರುವುದರಿಂದ ರಾಜ್ಯದ ಹಲವೆಡೆ ಜುಲೈ 31ರವರೆಗೆ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೇಶಕ ಸಿ.ಎಸ್‌.ಪಾಟೀಲ್‌ ಮಾಹಿತಿ ನೀಡಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಜುಲೈ 27ರಿಂದ ಜುಲೈ 31ರವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಮಂಗಳವಾರ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಮಾತ್ರ ಮಳೆಯಾಗಿದೆ. ಶಿವಮೊಗ್ಗ ಮತ್ತು ಕೊಲ್ಲೂರಿನಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ. ಬುಧವಾರ(ಜುಲೈ 28) ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಮುಂದಿನ ಎರಡು ದಿನ ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 29 ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ ಇರುವ ಹೆಚ್ಚಿನ ಸಾಧ್ಯತೆ ಇದೆ ಎಂದು ಪಾಟೀಲ್ ತಿಳಿಸಿದ್ದಾರೆ.

ರಸ್ತೆಮಧ್ಯೆ ಕೋತಿಗಳ ಹಿಂಡಿನ ಕಿತ್ತಾಟ: ಸಂಚಾರ ಸ್ಥಗಿತ

ಕಾಡಾನೆ ಹಿಂಡಿನ ಎದುರು ಕೀಟಲೆ: ವ್ಯಕ್ತಿಯನ್ನು ತುಳಿದ ಆನೆ

ನಾಳೆ ಬೆಳಗ್ಗೆ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ

ಉಪಮುಖ್ಯಮಂತ್ರಿಗಳಾಗಿ ಆರ್. ಅಶೋಕ್, ಗೋವಿಂದ ಕಾರಜೋಳ, ಶ್ರೀರಾಮುಲು ಆಯ್ಕೆ

ಸೂಪರ್ ಸಿಎಂ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಯೇ ಯಡಿಯೂರಪ್ಪ?

ರಿಯಾಲಿಟಿ ಶೋನಿಂದ ನಟಿ ಶಿಲ್ಪಾ ಶೆಟ್ಟಿ ಹೊರಕ್ಕೆ?

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!