ಪಂಜಾಬ: ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮಸೂದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತನೊರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪಂಜಾಬ್ ನ ಮಾನ್ಸಾ ಜಿಲ್ಲೆಯ ಅಕ್ಕಾನವಾಲಿ ಗ್ರಾಮದ ನಿವಾಸಿ ಪ್ರೀತಮ್ ಬಾದಲ್‍ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅವರು ವಿಷಕಾರಿ ವಸ್ತು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಪಂಜಾಬ್‍ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಸ್ವಗ್ರಾಮ ಬಾದಲ್‍ನಲ್ಲಿ ಭಾರತೀಯ ಕಿಸಾನ್ ಯೂನಿಯನ್ ಕಳೆದ ನಾಲ್ಕು ದಿನಗಳಿಂದ ರೈತ ಮಸೂದೆ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಂಡಿದೆ. ಪ್ರೀತಂ ಆತ್ಮಹತ್ಯೆಗೆ ಕಿಸಾನ್ ಯೂನಿಯನ್ ಖಂಡನೆ ವ್ಯಕ್ತಪಡಿಸಿದ್ದು, ಸರ್ಕಾರವೇ ಅವರ ಸಾವಿಗೆ ಹೊಣೆ. ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದೆ.
ರೈತ ಮಸೂದೆ ವಿರೋಧಿಸಿ ರೈತ ಆತ್ಮಹತ್ಯೆಗೆ ಶರಣು
Follow Us