Tuesday, August 9, 2022

ಕೃಷಿ ವಿರೋಧಿ ಧೋರಣೆ; ಬೆಂಗಳೂರಲ್ಲಿ ರೈತರ ಭಾರೀ ಪ್ರತಿಭಟನೆ

Follow Us

newsics.com ಬೆಂಗಳೂರು: ಕೇಂದ್ರ ಸರ್ಕಾರದ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜಧಾನಿ ಬೆಂಗಳೂರಿನಲ್ಲಿ ರೈತರು ಸೋಮವಾರ ಭಾರೀ ಪ್ರತಿಭಟನೆ ಆರಂಭಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ರೈತರು ಮೆಜೆಸ್ಟಿಕ್ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾದ  ವೇಳೆಯಲ್ಲೇ ಬೆಂಗಳೂರಿನಲ್ಲಿ ರೈತರು ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನಾ ಮೆರವಣಿಗೆಯಲ್ಲಿ 30 ಕ್ಕೂ ಹೆಚ್ಚು ಸಂಘಟನೆಗಳು ಪಾಲ್ಗೊಂಡಿವೆ.
ಮೆಜೆಸ್ಟಿಕ್ ರೈಲು ನಿಲ್ದಾಣದಿಂದ ಹೊರಟ ಪ್ರತಿಭಟನಾಕಾರರನ್ನು ಪೊಲೀಸರು ಆನಂದ್ ರಾವ್ ಸರ್ಕಲ್ ಬಳಿ ತಡೆದು ನಿಲ್ಲಿಸಿದ್ದಾರೆ. ಇದಕ್ಕೂ ಜಗ್ಗದ ರೈತರು ಆನಂದ್ ರಾವ್ ಸರ್ಕಲ್ ಫ್ಲೈ ಓವರ್ ಮೇಲೆಯೇ ಕುಳಿತು ಪ್ರತಿಭಟನೆ ಮುಂದುವರೆಸಿದ್ದಾರೆ. ಈ ವೇಳೆ ಮಾತನಾಡಿದ ರೈತ ಮಹಿಳೆ ಮಂಜುಳಾ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಮನಬಂದಂತೆ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ರೈತರನ್ನು ಸರ್ವನಾಶ ಮಾಡಲು ಹೊರಟಿವೆ ಎಂದು ಕಿಡಿಕಾರಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಾ ಮೊಬೈಲ್ ಬ್ಯಾನ್‌ಗೆ ಕೇಂದ್ರ ಸರ್ಕಾರ ಚಿಂತನೆ

newsics.com ನವದೆಹಲಿ: ಚೀನಾ ಕಂಪನಿಗಳ 12,000 ರೂ.ಗಳಿಗಿಂತ (150 ಡಾಲರ್) ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಮಾರಾಟ ನಿರ್ಬಂಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕುಗ್ಗುತ್ತಿರುವ ದೇಶೀಯ ಮೊಬೈಲ್ ಉದ್ಯಮ...

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌ ಸಂಬಂಧ ಇಬ್ಬರನ್ಮು‌ ಬಂಧಿಸಲಾಗಿದೆ ಈ ಘಟನೆ ಮಧ್ಯಪ್ರದೇಶದ...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...
- Advertisement -
error: Content is protected !!