Monday, November 29, 2021

ಆತ್ಮಹತ್ಯೆ ಬೇಡ ಎಂದ ಮಗನ ತಂದೆಯೇ ನೇಣಿಗೆ ಶರಣು!

Follow Us

ಪುಣೆ: ಶಾಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂಬ ಸಂದೇಶ ನೀಡುವ ಕವಿತೆ ಓದಿದ ಮಗ ಮನೆಗೆ ಮರಳುವ ವೇಳೆಗೆ ಸಾಲಭಾದೆ ತಾಳಲಾರದೆ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಣೆಯಲ್ಲಿ ನಡೆದಿದೆ.
ಇಲ್ಲಿನ ಭಾರಾಜ್ವಾಡಿಯ ನಿವಾಸಿ ಮಲ್ಹಾರಿ ಎಂಬ ರೈತ ತಮ್ಮ ತಂಗಿಯ ವಿವಾಹಕ್ಕೆ ಸಾಲ ಮಾಡಿಕೊಂಡಿದ್ದರು. ಜೊತೆಗೆ, ಟ್ರಕ್ ಗಾಗಿ ಪ್ರತ್ಯೇಕ ಸಾಲ ಮಾಡಿದ್ದರು. ಆದರೆ, ಆ ಟ್ರಕ್ ಕಳ್ಳತನವಾಗಿತ್ತು. ಇದೆಲ್ಲದರಿಂದ ಬೇಸತ್ತ ಮಲ್ಹಾರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಕತಾಳೀಯ ಎಂಬಂತೆ ಅದೇ ದಿನ ಶಾಲೆಯಲ್ಲಿ ಮರಾಠಿ ಭಾಷಾ ದಿನಾಚರಣೆ ಅಂಗವಾಗಿ ಅವರ ಪುತ್ರ ರೈತರಿಗೆ ಆತ್ಮಹತ್ಯೆಗೆ ಶರಣಾಗದಂತೆ ಸಲಹೆ ನೀಡುವ ಕವಿತೆ ವಾಚಿಸಿದ್ದನು.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!