ಅಹ್ಮದಾಬಾದ್: ಗುಜರಾತಿನ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಎಂಟು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಇವರೆಲ್ಲ ಕೊರೋನಾಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಸಾವನ್ನಪ್ಪಿದವರಲ್ಲಿ ಮೂವರು ಮಹಿಳೆಯರು ಮತ್ತು ಐದು ಮಂದಿ ಪುರುಷರಾಗಿದ್ದಾರೆ.
ಮುಂಜಾನೆ 3.30ರ ಹೊತ್ತಿಗೆ ತುರ್ತು ನಿಗಾ ಘಟಕದಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಆಸ್ಪತ್ರೆಯ ಇತರ ಭಾಗಗಳಿಗೆ ಹರಡಿತ್ತು ಎಂದು ವರದಿಯಾಗಿದೆ. ಖಾಸಗಿ ಆಸ್ಪತ್ರೆಯೊಂದರಲ್ಲಿ ಈ ದುರಂತ ಸಂಭವಿಸಿದೆ.
ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ. ಬೆಂಕಿ ದುರಂತದ ಹಿನ್ನೆಲೆಯಲ್ಲಿ ರೋಗಿಗಳನ್ನು ಇತರ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.