ನವದೆಹಲಿ: ರಾಜಧಾನಿ ನವದೆಹಲಿಯಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ. ಪತ್ ಪರ್ ಗಂಜ್ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. 32ಕ್ಕೂ ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ನಿರತವಾಗಿವೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಮುಂದುವರಿದಿದೆ. ಕಳೆದ ಒಂದು ತಿಂಗಳಿನಿಂದ ದೆಹಲಿಯಲ್ಲಿ ಬೆಂಕಿ ದುರಂತ ಪದೇ ಪದೇ ಸಂಭವಿಸುತ್ತಿದೆ