Thursday, December 2, 2021

ಬಾಗಲಕೋಟೆಯಲ್ಲಿ ಕೊರೋನಾಗೆ ಮೊದಲ ಬಲಿ

Follow Us

ಬಾಗಲಕೋಟೆ: ಇಲ್ಲಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೊಂಕಿತ ವೃದ್ಧ (75) ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ತಿಳಿಸಿದ್ದಾರೆ.
ನಗರದಲ್ಲಿ ಕಿರಾಣಿ ಹಾಗೂ ಅಡುಗೆ ಎಣ್ಣೆ ವರ್ತಕರಾಗಿದ್ದ ವೃದ್ಧ ಮಾರ್ಚ್ 31ರಂದು ಅನಾರೋಗ್ಯದ ಕಾರಣ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಯಾವುದೇ ವಿದೇಶ, ರಾಜ್ಯ, ಪರರಾಜ್ಯ, ಪರ ಜಿಲ್ಲೆಗೂ ಪ್ರವಾಸ ಮಾಡಿರಲಿಲ್ಲ, ಇವರಿಗೆ ಕೋವಿಡ್ ಸೋಂಕು ತಗುಲಿರುವುದು ಗುರುವಾರ ರಾತ್ರಿಯಷ್ಟೇ ದೃಢಪಟ್ಟಿತ್ತು. ಬೆಂಗಳೂರಿನಿಂದ ಹತ್ತು ದಿನದ ಹಿಂದೆ ಊರಿಗೆ ಬಂದಿದ್ದ ಮೃತ ವೃದ್ಧ ವ್ಯಾಪಾರಿಯ ಮಗ, ಮಗಳು, ಕುಟುಂಬದ ಇನ್ನೊಬ್ಬರ ವರದಿ ನೆಗೆಟಿವ್ ಎಂದು ಮಾಹಿತಿ ಸಿಕ್ಕಿದೆ. ಜಿಲ್ಲೆಯಲ್ಲಿ ಮೊದಲ ಸಾವು ಸಂಭವಿಸಿರುವುದು ಜಿಲ್ಲೆಯ ಜನರ ಆತಂಕವನ್ನು ಹೆಚ್ಚಿಸಿದೆ. ಬಾಗಲಕೋಟೆ ವೃದ್ಧನ ಸಾವಿನ ಮೂಲಕ ರಾಜ್ಯದಲ್ಲಿ ಕೊರೋನಾದಿಂದ ಮೃತರಾದವರ ಸಂಖ್ಯೆ ನಾಲ್ಕಕ್ಕೇರಿದೆ.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!