Monday, November 29, 2021

ಮೇ 5ರಂದು ಪ್ರಥಮ ಪಿಯು ಫಲಿತಾಂಶ

Follow Us

ಬೆಂಗಳೂರು: ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಮೇ 5ರಂದು ಪ್ರಕಟವಾಗಲಿದೆ.
ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ನಿರ್ದೇಶನದಂತೆ ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಫಲಿತಾಂಶ ಪ್ರಕಟಿಸಲು ಇಲಾಖೆ ಮುಂದಾಗಿದೆ.
ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜು‌ಮಟ್ಟದಲ್ಲಿಯೇ ನಿರ್ವಹಿಸಲು‌ ಮಾನದಂಡಗಳನ್ನು ಮುಂದೆ ತಿಳಿಸಲಾಗುವುದು ಎಂದೂ ಸಹ ಸುತ್ತೋಲೆ ಸ್ಪಷ್ಟಪಡಿಸಿದೆ.
ಶುಲ್ಕ ವಸೂಲಿಗೆ ಬ್ರೇಕ್:
ಖಾಸಗಿ ಪಿಯು ಕಾಲೇಜುಗಳು ಇಂತಹ ಸಾಮಾಜಿಕ ಸಂಕಷ್ಟದ ಸಂದರ್ಭದಲ್ಲಿ ಅಸಹಾಯಕ ಪೋಷಕರಿಂದ ವಿದ್ಯಾರ್ಥಿಗಳ ಶುಲ್ಕ ಪಾವತಿಗೆ ಒತ್ತಾಯಿಸಬಾರದು, ಇಚ್ಛಿಸುವ ಪೋಷಕರಿಂದ ಕಂತುಗಳ ಮೂಲಕ ಸ್ವೀಕರಿಸತಕ್ಕದ್ದು ಹಾಗೂ 2020-21 ನೇ ಈ ಸಾಲಿಗೆ ಯಾವುದೇ ಕಾರಣಕ್ಕೂ ಬೋಧನ ಶುಲ್ಕವನ್ನು ಹೆಚ್ಚಿಸಬಾರದೆಂದು ಇಲಾಖೆ ನಿರ್ದೇಶನ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!