Tuesday, April 13, 2021

ವಿಷಾನಿಲ ಸೋರಿಕೆ ಪ್ರಕರಣ: ಮೃತರ ಸಂಖ್ಯೆ 9ಕ್ಕೆ ಏರಿಕೆ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿ ಸಂಭವಿಸಿದ ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿದೆ. ಇಂದು ಮುಂಜಾನೆ  4 ಗಂಟೆ ಹೊತ್ತಿಗೆ ಈ ದುರಂತ ಸಂಭವಿಸಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 40 ದಿನಗಳಿಂದ  ಸ್ಥಗಿತಗೊಂಡಿದ್ದ ಎಲ್ ಜಿ ಪಾಲಿಮರ್ಸ್ ಕಾರ್ಖಾನೆ ಇಂದಿನಿಂದ ಚಟುವಟಿಕೆ ಆರಂಭಿಸಲು ಎಲ್ಲ ಸಿದ್ದತೆ ನಡೆಸಿತ್ತು. ಸುಮಾರು 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ವಿಷಾನಿಲ ಹರಡಿದ್ದು 300ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಇವರಲ್ಲಿ 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಘಟನೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಳವಳ ವ್ಯಕ್ತಪಡಿಸಿದ್ದಾರೆ. ಆಂಧ್ರ ಪ್ರದೇಶ ಪೊಲೀಸ್ ಮಹಾ ನಿರ್ದೇಶಕರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಈ ಮಧ್ಯೆ ಪರಿಸ್ಥಿತಿ ಅತ್ಯಂತ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದಾರೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಮೋದಿ, ಅಗತ್ಯ ಇರುವ ಎಲ್ಲ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.  ಕೇಂದ್ರ ಸರ್ಕಾರ ಪರಿಸ್ಥಿತಿಯನ್ನು ನಿಕಟವಾಗಿ  ಅವಲೋಕಿಸುತ್ತಿದ್ದು, ಎಲ್ಲ ಸಹಾಯ ನೀಡುವುದಾಗಿ ಭರವಸೆ ನೀಡಿದೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!