Tuesday, April 13, 2021

ಮುಂಗಾರು ಚುರುಕು; 48 ಗಂಟೆಗಳಲ್ಲಿ ಉತ್ತಮ ಮಳೆ

ನವದೆಹಲಿ: ಮುಂದಿನ 48 ಗಂಟೆಗಳ ಅವಧಿಯಲ್ಲಿ ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶ ರಾಜ್ಯಗಳ ಹಲವೆಡೆ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಮುಂಗಾರು ಚುರುಕಾಗಿದ್ದು, ಗುಜರಾತ್‌, ಜಾರ್ಖಂಡ್‌, ಬಿಹಾರ, ಮಧ್ಯಪ್ರದೇಶ, ಛತ್ತೀಸ್‌ಗಢ, ಪೂರ್ವ ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ. ಮಹಾರಾಷ್ಟ್ರ, ಛತ್ತೀಸ್‌ಗಢ, ಒಡಿಶಾÏ, ಸಿಕ್ಕಿಂಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೊಂಕಣ ಮತ್ತು ಗೋವಾ ರಾಜ್ಯಗಳ ಹಲವೆಡೆ ಚದುರಿದಂತೆ ಹಾಗೂ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಮಧ್ಯೆ, ಸೋಮವಾರ ಕರ್ನಾಟಕದ ಕರಾವಳಿ ಪ್ರದೇಶ ಸೇರಿದಂತೆ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!