Saturday, April 17, 2021

ಭಾರತದಲ್ಲಿ 75000 ಕೋಟಿ ರೂಪಾಯಿ ಹೂಡಿಕೆಗೆ ಗೂಗಲ್ ನಿರ್ಧಾರ

ನವದೆಹಲಿ: ಭಾರತದಲ್ಲಿ ಭಾರೀ ಬಂಡವಾಳ ಹೂಡಿಕೆಗೆ ಗೂಗಲ್ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಜತೆಗಿನ ವೀಡಿಯೋ ಸಂವಾದದಲ್ಲಿ ಗೂಗಲ್ ಸಿಇಒ ಸುಂದರ್ ಪಿಚ್ಚೈ ಈ ಘೋಷಣೆ ಮಾಡಿದ್ದಾರೆ. ಭಾರತದಲ್ಲಿ ಡಿಜಿಟಲ್ ಕ್ಷೇತ್ರದ ಅಭಿವೃದ್ದಿಯಲ್ಲಿ  ಗೂಗಲ್  ಸಕ್ರಿಯ ಪಾತ್ರ ನಿರ್ವಹಿಸಲಿದೆ. . ಮುಂದಿನ ಐದರಿಂದ ಏಳು ವರ್ಷಗಳ ಅವಧಿಯಲ್ಲಿ 75 ಸಾವಿರ ಕೋಟಿ ರೂಪಾಯಿ  ಅಂದರೆ 10 ಬಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ  ಸುಂದರ್ ಪಿಚ್ಚೈ  ಹೇಳಿದರು.

ಕೊರೋನಾದಿಂದ ಜಾಗತಿಕ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಗೂಗಲ್ ನಿರ್ಧಾರ ಅತ್ಯಂತ ಮಹತ್ವಪಡೆದುಕೊಂಡಿದೆ. ಭಾರತದಲ್ಲಿ ಡಿಜಿಟಲ್ ಕ್ಷೇತ್ರದ ಅಭಿವೃದ್ಧಿಗೆ  ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೈಗೊಂಡಿರುವ  ಕ್ರಮಗಳನ್ನು  ಗೂಗಲ್ ಸಿಇಒ ಶ್ಲಾಘಿಸಿದರು.

ಗೂಗಲ್ ನಿರ್ಧಾರವನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಅಗತ್ಯ ಇರುವ ಎಲ್ಲ ಸಹಕಾರ ನೀಡುವುದಾಗಿ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!