newsics.com
ಬೆಂಗಳೂರು: ಕೊರೋನಾ ಅಟ್ಟಹಾಸದ ನಡುವೆಯೇ ನಾಳೆಯಿಂದ (ಸೆ.15) ಸರ್ಕಾರಿ ವೈದ್ಯರು ಮುಷ್ಕರದ ಹಾದಿ ತುಳಿದಿದ್ದಾರೆ. ಎಲ್ಲಾ ಸರ್ಕಾರಿ ಸಭೆಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.
ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4,968 ವೈದ್ಯರು ವೇತನ ಪರಿಷ್ಕರಣೆಗೆ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನೆ ಆರಂಭಿಸಲಿದ್ದಾರೆ. ಯಾವುದೇ ರೀತಿಯ ಆರೋಗ್ಯ ಸೇವೆಯಲ್ಲಿ ಕೆಲಸಗಳಲ್ಲಿ ತೊಡಗಿಕೊಳ್ಳದಿರಲು ವೈದ್ಯರು ನಿರ್ಧಾರ ಮಾಡಿದ್ದಾರೆ.
ಹೆಲ್ತ್ ರಿಪೋರ್ಟ್ ನೀಡದೇ ಆಸ್ಪತ್ರೆಗಳನ್ನ ಕ್ಲೋಸ್ ಮಾಡಲು ರಾಜ್ಯ ಸರ್ಕಾರಿ ವೈದ್ಯರ ಸಂಘ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಯಾವುದೇ ರೀತಿಯ ಆನ್‍ಲೈನ್ ಅಥವಾ ಆಫ್‍ಲೈನ್ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸದಿರಲು ಹಾಗೂ ಕೆಲಸದಲ್ಲಿ ತೊಡಗಿಕೊಳ್ಳದಿರಲು ಸರ್ಕಾರಿ ವೈದ್ಯರ ಸಂಘ ನಿರ್ಧರಿಸಿದೆ. ಈ ಹಿಂದೆ ಸರ್ಕಾರದ ಮುಂದೆ ಇಟ್ಟಿದ್ದ ಬೇಡಿಕೆಗಳು ಈಡೇರಿಲ್ಲ. ಹೀಗಾಗಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರ ವೈದ್ಯರ ಸಂಘ ಪ್ರತಿಭಟನೆ ನಡೆಸಲಿದೆ.
ಎಲ್ಲ ವಿಧದ ಈರುಳ್ಳಿ ರಫ್ತಿನ ಮೇಲೆ ನಿಷೇಧ ಹೇರಿದ ಕೇಂದ್ರ
ಕೊರೋನಾ ಆತಂಕ…
ಮಂಗಳವಾರದಿಂದ ರಾಜ್ಯದಲ್ಲಿ ವೈದ್ಯರು ಪ್ರತಿಭಟನೆ ಆರಂಭಿಸಿದರೆ ಕೊರೋನಾ ಸೇರಿದಂತೆ ಯಾವುದೇ ಹೆಲ್ತ್ ಬುಲೆಟಿನ್ ಸಿಗೋದು ಡೌಟು. ಹಾಗೇ ಕೊವಿಡ್ ವರದಿಗಳನ್ನ ನೀಡದಿದ್ದರೆ ಮತ್ತಷ್ಟು ಕೇಸ್ ಹೆಚ್ಚಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಸಾವು ನೋವು ಹೆಚ್ಚಾಗಬಹುದು. ವೈದ್ಯರ ಪ್ರತಿಭಟನೆಯಿಂದ ಆರೋಗ್ಯ ತುರ್ತು ಪರಿಸ್ಥಿತಿ ಉಲ್ಬಣಗೊಳ್ಳುವ ಸಂಭವ ಇದೆ ಎಂದು ಹೇಳಲಾಗಿದೆ.
ರಾಗಿಣಿ @ ಪರಪ್ಪನ ಅಗ್ರಹಾರ, ಕೈದಿ ನಂಬರ್ 6604