Wednesday, July 6, 2022

ಶಿಕ್ಷಕರಿಗೆ ಜು.31ರವರೆಗೆ ವರ್ಕ್ ಫ್ರಂ ಹೋಮ್’ಗೆ ಸರ್ಕಾರ ಸೂಚನೆ

Follow Us

ಬೆಂಗಳೂರು: ಜು.31ರವರೆಗೆ ವರ್ಕ್ ಫ್ರಂ ಹೋಂ ಮೂಲಕ ಕೆಲಸ ಮಾಡುವಂತೆ ರಾಜ್ಯದ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗೆ ರಾಜ್ಯ ಸರ್ಕಾರ ಸೂಚಿಸಿದೆ.
ವಿವಿಧ ಶೈಕ್ಷಣಿಕ ಚಟುವಟಿಕೆಗೆ ತಯಾರಿ ನಡೆಸುವ ಸಲುವಾಗಿ ಶಾಲೆಗೆ ಆಗಮಿಸಿ, ಕೆಲಸ ಮಾಡುವಂತೆ ರಾಜ್ಯ ಸರ್ಕಾರ ಈ ಮೊದಲು ಹೊರಡಿಸಿದ್ದ ಆದೇಶವನ್ನು ಕೈಬಿಟ್ಟಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿ ಆರ್ ಸೋಮಶೇಖರ್ ಈ ಕುರಿತಂತೆ ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ವೈರಸ್ ಸೋಂಕು ಹರಡುತತಿರುವುದು ಮುಂದುವರೆಯುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 31ರವರೆಗೆ ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿಯ ಉನ್ನತ ಶಿಕ್ಷಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಶಿಕ್ಷಕರು, ಬೋಧಕೇತರ ಸಿಬ್ಬಂದಿ ಹಾಗೂ ಇತರೇ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿದೆ.
ಎಸ್ ಎಸ್ ಎಲ್ ಸಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಹಾಗೂ ಕೋವಿಡ್-19 ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಹೊರತುಪಡಿಸಿ ಉಳಿದ ಎಲ್ಲಾ ಶಾಲೆಗಳ ಶಿಕ್ಷಕರು, ಬೋಧಕೇತರ ಸಿಬ್ಬಂದಿ, ಸಂಶೋಧಕರು, ಗುತ್ತಿಗೆ, ಗೌರವ ಶಿಕ್ಷಕರು ಸೇರಿದಂತೆ ಎಲ್ಲಾ ಸಿಬ್ಬಂದಿ ವರ್ಗದವರು ಜುಲೈ 31ರವರೆಗೆ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಸೂಚಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!