Saturday, November 27, 2021

ಜೂನ್‌ ನಲ್ಲಿ ವಿ.ವಿ. ಪರೀಕ್ಷೆ ನಡೆಸಲು ಸರ್ಕಾರ ಚಿಂತನೆ

Follow Us

ಬೆಂಗಳೂರು: ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಬರುವ ಜೂನ್‌ ವೇಳೆಗೆ ನಡೆಸುವ ಉದ್ದೇಶವಿದ್ದು, ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.
ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಗುರುವಾರ ವೀಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಸಚಿವರು ಜೂಮ್‌ ಆಪ್‌ ಮೂಲಕ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಆಂತರಿಕ ಪರೀಕ್ಷೆಯ ಅಂಕಗಳನ್ನು ಆಧರಿಸಿ ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶ ನಿರ್ಧರಿಸುವ ಬಗ್ಗೆಯೂ ಚಿಂತನೆ ನಡೆದಿದೆ. ಹಿಂದಿನ ಪರೀಕ್ಷೆಗಳ ಫಲಿತಾಂಶವನ್ನು ತಡೆ ಹಿಡಿದಿದ್ದರೆ, ಕೂಡಲೇ ಆ ಫಲಿತಾಂಶಗಳನ್ನು ಪ್ರಕಟಿಸುವಂತೆ ಸೂಚಿಸಲಾಗಿದೆ ಎಂದು ಅಶ್ವತ್ಥನಾರಾಯಣ ವಿವರಿಸಿದರು.
ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಪಾಠ ಮಾಡಲಾಗುತ್ತಿದೆ. ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಆಯುಕ್ತಾಲಯ ಯೂಟ್ಯೂಬ್‌ನಲ್ಲಿ ಪಾಠ ಮಾಡಿ ಅಪ್‌ ಲೋಡ್‌ ಮಾಡಿವೆ. ವಿಜಯೀ ಭವ ಮತ್ತು ಜ್ಞಾನ ನಿಧಿ ಎಂಬ ಚಾನೆಲ್‌ಗಳ ಮೂಲಕ ಪಾಠ ಪ್ರವಚನ ಮಾಡಲಾಗಿದೆ. ಜೂಮ್‌, ಸ್ಕೈಪ್‌ ಮೂಲಕ ಪಾಠ ಮಾಡಲಾಗುತ್ತಿದೆ. ಕರ್ನಾಟಕ ಮುಕ್ತ ವಿವಿ ಸಹ ಒಂದು ಆಪ್‌ ಅಭಿವೃದ್ಧಿ ಮಾಡಿದ್ದು, ಶೀಘ್ರದಲ್ಲೇ ಅದು ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ. ಕಲಿಕೆಗೆ ಪೂರಕವಾದ ಅಂಶಗಳು ಇ-ಕಂಟೆಂಟ್‌ನಲ್ಲಿ ಲಭ್ಯವಿರಲಿದೆ.
ಮುಂದಿನ ಶೈಕ್ಷಣಿಕ ವರ್ಷದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆಯಲ್ಲಿ ಎಲ್ಲಾ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಪಠ್ಯಕ್ರಮ, ಬೋಧನಾ‌ ವಿಧಾನ, ಪರೀಕ್ಷಾ ವಿಧಾನ ಬದಲಾವಣೆಗೆ ಚಿಂತನೆ ನಡೆದಿದೆ ಎಂದು ಡಾ. ಅಶ್ವಥ್ ನಾರಾಯಣ ತಿಳಿಸಿದರು.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!