Friday, May 20, 2022

ಅ.15ರ ಬಳಿಕ ಪಿಯು ಕಾಲೇಜು, ಹೈಸ್ಕೂಲ್ ಆರಂಭಕ್ಕೆ ಸರ್ಕಾರ ಚಿಂತನೆ

Follow Us

newsics.com
ಬೆಂಗಳೂರು: ಶಾಲಾ ಪುನಾರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದ್ದು, ಅಕ್ಟೋಬರ್ 15 ರ ಬಳಿಕ ಪಿಯುಸಿ ಹಾಗೂ ಪ್ರೌಢಶಾಲೆಗಳ ಆರಂಭಕ್ಕೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಶಿಕ್ಷಣ ಸಚಿವ ಸುರೇಶಕುಮಾರ್ ಪ್ರೌಢಶಾಲೆ ಹಾಗೂ ಪಿಯು ಉಪನ್ಯಾಸಕರ ಪ್ರತಿನಿಧಿಗಳ ಜತೆ ಚರ್ಚೆ ನಡೆಸಿದ್ದು, ಹಂತ ಹಂತವಾಗಿ ತರಗತಿ ಆರಂಭಿಸಲು ಚರ್ಚೆ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. ಬಳಿಕ ಪರಿಸ್ಥಿತಿ ನೋಡಿಕೊಂಡು 7 ಹಾಗೂ 8 ನೇ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ಅಕ್ಟೋಬರ್ 15ರಿಂದ ಹಂತ ಹಂತವಾಗಿ ಶಾಲಾ ಕಾಲೇಜ್​ ಪುನರ್​ ಆರಂಭ ಮಾಡುವ ಕುರಿತು ರಾಜ್ಯ ಸರ್ಕಾರ ತಿಳಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ ಹಂತಹಂತವಾಗಿ ಶಾಲೆ ಆರಂಭಿಸುವುದಾಗಿ ತಿಳಿಸಿದೆ.

ಕೊರೋನಾ ಕಡಿಮೆಯಾಗುವವರೆಗೆ (9 ರಿಂದ 12 ನೇ ತರಗತಿವರೆಗೆ) ಶಾಲಾ ಕಾಲೇಜು ಆರಂಭಿಸುವುದಿಲ್ಲ ಎಂದು ಎರಡು ದಿನಗಳ ಹಿಂದಷ್ಟೇ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂಡಳಿ ಸ್ಪಷ್ಟನೆ ನೀಡಿತ್ತು. ಅಷ್ಟೇ ಅಲ್ಲ, ಸಚಿವ ಸುರೇಶ ಕುಮಾರ್ ಕೂಡ ಶಾಲೆ ಆರಂಭಿಸಲು ಸರ್ಕಾರಕ್ಕೆ ಧಾವಂತ ಇಲ್ಲ ಎಂದು ಹೇಳಿದ್ದರು. ಆದರೆ ತೆರೆಮರೆಯಲ್ಲಿ ಶಾಲಾ ಕಾಲೇಜು ಆರಂಭಕ್ಕೆ ಸಿದ್ಧತೆ ನಡೆಸಿರುವುದು ಪೋಷಕರ ಆತಂಕ ಹೆಚ್ಚಿಸಲಿದೆ.

ಕೊರೋನಾ ಕೇಸ್ ಹೆಚ್ಚಳ; ಕೇರಳದಲ್ಲಿ ನಾಳೆಯಿಂದ ನಿಷೇಧಾಜ್ಞೆ

ಟ್ಯೂಷನ್’ಗೆ ಹೋಗಿದ್ದ ಏಳು ವರ್ಷದ 15 ಮಕ್ಕಳಿಗೆ ಕೊರೋನಾ ಸೋಂಕು!

ಮತ್ತಷ್ಟು ಸುದ್ದಿಗಳು

Latest News

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900 ರೂ. ಏರಿಕೆಯಾಗಿದೆ. ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ...
- Advertisement -
error: Content is protected !!