Saturday, April 17, 2021

ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಸರ್ಕಾರ ಗಂಭೀರ ಎಚ್ಚರಿಕೆ

ಬೆಂಗಳೂರು: ಸರ್ಕಾರ ಕೇಳಿದಷ್ಟು ಬೆಡ್ ಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳ ಮಾಲೀಕರಿಗೆ ಸರ್ಕಾರ ಗಂಭೀರ ಎಚ್ಚರಿಕೆ ನೀಡಿದೆ.
ಒಪ್ಪಂದದಂತೆ ಶೇಕಡ 50ರಷ್ಟು ಬೆಡ್ ಗಳನ್ನು ಸರ್ಕಾರದ ವಶಕ್ಕೆ ನೀಡಬೇಕು. ಸರ್ಕಾರದ ಜತೆಗಿನ ಒಪ್ಪಂದವನ್ನು ಪಾಲಿಸದಿದ್ದರೆ ವಿದ್ಯುತ್, ನೀರಿನ ಸಂಪರ್ಕ ಕಡಿತ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಖಾಸಗಿ ಆಸ್ಪತ್ರೆ ಒಪಿಡಿ ಕ್ಲೋಸ್ ಮಾಡಿಸಲಾಗುವುದು. ಆಸ್ಪತ್ರೆಯ ಮಾನ್ಯತೆ ರದ್ದುಮಾಡಲೂ ಕ್ರಮ ಕೈಗೊಳ್ಳಲಾಗುವುದು ಎಂದು ಸುಧಾಕರ್ ಎಚ್ಚರಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳು ಹಾಸಿಗೆ ನೀಡದೆ ಸತಾಯಿಸುತ್ತಿವೆ. ಹೀಗೆ ಹಠ ಮಾಡಿದರೆ ಆರಂಭದಲ್ಲಿ ಒಪಿಡಿಗಳನ್ನು ಮುಚ್ಚಿಸಿ ಪ್ರಾಥಮಿಕ ಎಚ್ಚರಿಕೆ ನೀಡಲಾಗುವುದು ಎಂದರು.
ಖಾಸಗಿ ಆಸ್ಪತ್ರೆಗಳು ಒಪ್ಪಂದದಂತೆ 4500 ಹಾಸಿಗೆ ನೀಡಬೇಕು. ಆದರೆ 3500 ಹಾಸಿಗೆ ಲಭ್ಯ ಇರುವುದಾಗಿ ಹೇಳಿದ್ದವು. ಆದರೆ ಸರ್ಕಾರಕ್ಕೆ 116 ಹಾಸಿಗೆಗಳನ್ನು ಮಾತ್ರ ನೀಡಿವೆ. ಈ ಬಗ್ಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಪುನರುಚ್ಚರಿಸಿದರು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!