newsics.com
ಮಂಡ್ಯ: ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಪ್ರತಿ ತಿಂಗಳು ಹುಂಡಿ ತೆಗೆಯಬೇಕು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸೂಚಿಸಿದ್ದಾರೆ.
ಶುಕ್ರವಾರ ಮನ್ದಯಾದ ಗುತ್ತಲಿನ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರ ಹತ್ಯೆಗೈದು ಹುಂಡಿ ಹಣ ಅಪಹರಿಸಿದ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ತಿಳಿಸಿದ್ದಾರೆ.
ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಶನಿವಾರ ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಲೆ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚುವಂತೆ ಸೂಚನೆ ನೀಡಿದರು.
ಈ ಪ್ರಕರಣದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಲು ಮುಜರಾಯಿ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದೇನೆ ಎಂದರು.
ಅ.17ರಂದು ಕೊರೋನಾ ವಾರಿಯರ್ಸ್’ಗಳಿಂದ ಸರಳ ದಸರಾ ಉದ್ಘಾಟನೆ
ಗರ್ಭಿಣಿ ಮೇಘನಾರಾಜ್’ಗೆ ಧೈರ್ಯ ತುಂಬಿದ ನಟಿಯರು
ಡಿಎಂಕೆ ಸಂಸದನ 89 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿಗೆ ಇಡಿ ಆದೇಶ