newsics.com
ಬೆಂಗಳೂರು: ಆಗಸ್ಟ್ 23ರಿಂದ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ತಿಳಿಸಿದ್ದಾರೆ.
ವಿವಿಧ ಕುಲಪತಿಗಳ ಜತೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಕುರಿತು ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ನೂತನ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆಯಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ವಿಷಯವಾರು ಮಾದರಿ ಪಠ್ಯಕ್ರಮ ಸಿದ್ಧಪಡಿಸಲು ವಿಷಯ ತಜ್ಞರ 32 ಸಮಿತಿ ರಚಿಸಲಾಗಿದೆ. ಸಮಿತಿಗಳ ವರದಿ ಆಧರಿಸಿ ಆಗಸ್ಟ್ 31 ರೊಳಗೆ ಪಠ್ಯ ಸಿದ್ಧಪಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಕೆಲವೇ ದಶಕಗಳಲ್ಲಿ ಭಾರತದಲ್ಲಿ ಹೆಚ್ಚಲಿದೆ ಬರ, ಬಿಸಿಗಾಳಿ, ಚಂಡಮಾರುತ, ಮಳೆ