Saturday, April 17, 2021

GSLV ಮೊದಲ ಪರೀಕ್ಷಾರ್ಥ ಉಡಾವಣೆ ವಿಳಂಬ- ಇಸ್ರೋ

ನವದಹೆಲಿ: ಕೋವಿಡ್ 19 ಸೃಷ್ಟಿಸಿರುವ ಬಿಕ್ಕಟ್ಟಿನಿಂದಾಗಿ ಮಹತ್ವಾಕಾಂಕ್ಷಿ ಗಗನಯಾನ್ ಯೋಜನೆಯ ಭಾಗವಾದ ಜಿಎಸ್’ಎಲ್’ವಿ ಪರೀಕ್ಷಾರ್ಥ ರಾಕೆಟ್ ಉಡಾವಣೆಯನ್ನು ಮುಂದೂಡಲಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ಇಸ್ರೋ ತಿಳಿಸಿದೆ.
ಪ್ರಸ್ತುತ ಪರಿಸ್ಥಿತಿಯಲ್ಲಿ ಜಿಎಸ್’ಎಲ್’ವಿ ಪರೀಕ್ಷಾರ್ಥ ರಾಕೆಟ್ ಉಡಾವಣೆ ಈ ವರ್ಷ ಸಾಧ್ಯವಿಲ್ಲ. ಹೀಗಾಗಿ ಅನಿರ್ದಿಷ್ಟಾವಧಿಗೆ ಈ ಗಗನಯಾನ್ ಯೋಜನೆಯನ್ನು ಮುಂದೂಡಲಾಗಿದೆ ಎಂದು ಇಸ್ರೋ ಛೇರ್ಮನ್ ಕೆ. ಸಿವನ್ ತಿಳಿಸಿದ್ದಾರೆ.
ಎರಡು ಪರೀಕ್ಷಾರ್ಥ ಉಡಾವಣೆಗಳ ಪೈಕಿ ಒಂದನ್ನು ಈ ವರ್ಷ ನಡೆಸಲು ಇಸ್ರೋ ಉದ್ದೇಶಿಸಿತ್ತು. ಭಾರತದ ಮಾನವಸಹಿತ ಬಾಹ್ಯಾಕಾಶ ಯೋಜನೆ ಗಗನ್’ಯಾನ್’ನ ಭಾಗವಾಗಿ ಈ ವರ್ಷ ನಡೆಯಬೇಕಿದ್ದ ಜಿಎಸ್’ಎಲ್ ವಿ ರಾಕೆಟ್’ನ ಪರೀಕ್ಷಾರ್ಥ ಉಡಾವಣೆಯನ್ನು ಮುಂದೂಡಲಾಗಿದೆ ಎಂದು ಇಸ್ರೋ ಹೇಳಿದೆ. ಇಸ್ರೋದ ಈ ಹಿಂದಿನ ಯೋಜನೆಯ ಪ್ರಕಾರ​, ಮೊದಲ ಪರೀಕ್ಷಾರ್ಥ ಉಡಾವಣೆಯಲ್ಲಿ ಹ್ಯೂಮನಾಯ್ಡ್ ವ್ಯೋಮಮಿತ್ರವನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಉದ್ದೇಶಿಸಲಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!