newsics.com
ನವದೆಹಲಿ: ಹಾಲು ಹಾಗೂ ಹಾಲಿನ ಉತ್ಪನ್ನಗಳ ದರ ಏರಿಕೆಯಾಗುವ ಸಾಧ್ಯತೆಯಿದೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ ಜಿಎಸ್ಟಿ ಕೌನ್ಸಿಲ್ 47ನೇ ಸಭೆಯಲ್ಲಿ ಹಾಲಿನ ಉತ್ಪನ್ನಗಳಾದ ಪ್ರಿ-ಪ್ಯಾಕ್ ಮಾಡಿದ ಮೊಸರು, ಲಸ್ಸಿ ಮತ್ತು ಮಜ್ಜಿಗೆ ಸೇರಿದಂತೆ ಕೆಲವು ಆಹಾರಗಳ ಮೇಲಿನ ತೆರಿಗೆಯಿಂದ ವಿನಾಯಿತಿಯನ್ನು ಹಿಂಪಡೆದಿರುವುದೇ ದರ ಏರಿಕೆಗೆ ಕಾರಣವಾಗಿದೆ.
ಜಿಎಸ್ಟಿ ಹೆಚ್ಚುವರಿ ವೆಚ್ಚ ಹಿನ್ನೆಲೆಯಲ್ಲಿ ಡೈರಿ ಕಂಪನಿಗಳು ಉತ್ಪನ್ನಗಳ ಬೆಲೆಗಳನ್ನು ಹೆಚ್ಚಿಸಬಹುದು ಎಂದು ಅಂದಾಜಿಸಲಾಗಿದೆ.
ಮೊಸರು ಮತ್ತು ಮಜ್ಜಿಗೆ ಮೇಲಿನ ಜಿಎಸ್ಟಿ ದರವನ್ನು ಶೇಕಡಾ 5ರಷ್ಟು ವಿಧಿಸುವ ನಿರೀಕ್ಷೆಯಿದೆ ಎಂದು ವರದಿಯೊಂದು ತಿಳಿಸಿದೆ.
ಹೆಚ್ಚುತ್ತಿರುವ ಹಾಲಿನ ಸಂಗ್ರಹಣೆ ಬೆಲೆಗಳು ಮತ್ತು ಶೇಕಡ 5 ರಷ್ಟು ಹೊಸ ಸಂಭವನೀಯ ಜಿಎಸ್ಟಿಯನ್ನು ಪರಿಗಣಿಸಿ, ಡೈರಿ ಕಂಪನಿಗಳು ಹೆಚ್ಚುವರಿ ವೆಚ್ಚಗಳನ್ನು ಗ್ರಾಹಕರಿಗೆ ವರ್ಗಾಯಿಸುವ ಸಾಧ್ಯತೆ ಇದೆ ವರದಿಗಳು ತಿಳಿಸಿವೆ.
ಮಹಾರಾಷ್ಟ್ರದಲ್ಲಿ ಶಿಂಧೆಗೆ ಮೊದಲ ಜಯ: ರಾಹುಲ್ ನರ್ವೆಕರ್ ನೂತನ ಸ್ಪೀಕರ್