Saturday, April 17, 2021

ರೈಲು ಪ್ರಯಾಣಿಕರಿಗೆ ಮಾರ್ಗಸೂಚಿ; ಮಾಸ್ಕ್ ಧರಿಸುವುದು ಕಡ್ಡಾಯ

ನವದೆಹಲಿ: ಲಾಕ್ ಡೌನ್ ನಿಂದ ಸ್ಥಗಿತಗೊಂಡಿದ್ದ ಪ್ರಯಾಣಿಕರ ರೈಲು ಸೇವೆಯನ್ನು ರೈಲ್ವೆ ಇಲಾಖೆ ಮಂಗಳವಾರದಿಂದ (ಮೇ 12) ಆರಂಭಿಸಲಿದ್ದು, ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಿದೆ.
ರೈಲಿನಲ್ಲಿ ಸಂಚರಿಸುವವರಿಗೆ ಸೋಮವಾರ ಕೇಂದ್ರ ಗೃಹ ಇಲಾಖೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಆನ್‌ ಲೈನ್ ಮೂಲಕ ಟಿಕೆಟ್ ಬುಕ್ ಮಾಡಿಯೂ ಅದು ಖಚಿತವಾಗಿಲ್ಲ ಎಂದರೆ ನೀವು ರೈಲ್ವೆ ನಿಲ್ದಾಣ ಪ್ರವೇಶಿಸುವಂತಿಲ್ಲ. ಆರೋಗ್ಯ ಇಲಾಖೆ, ರೈಲ್ವೆ ಇಲಾಖೆ ಮತ್ತು ಗೃಹ ಇಲಾಖೆ ಸೇರಿ ಮಾರ್ಗಸೂಚಿಯನ್ನು ಅಂತಿಮಗೊಳಿಸಿವೆ.
ರೈಲು ಸಂಚಾರದ ಸಮಯ, ಟಿಕೆಟ್ ಬುಕ್ಕಿಂಗ್, ನಿಲ್ದಾಣಕ್ಕೆ ಬರುವುದು, ನಿಲ್ದಾಣದಿಂದ ವಾಪಸ್ ಹೋಗುವುದು. ಬೋಗಿ ಹೇಗಿರಬೇಕು ಎಂಬ ಎಲ್ಲಾ ಅಂಶಗಳಿಗೂ ಮಾರ್ಗಸೂಚಿಯಳ್ಳಿ ವಿವರಿಸಲಾಗಿದೆ.
ಖಚಿತವಾದ ಟಿಕೆಟ್ ಇದ್ದರೆ ಮಾತ್ರ ಪ್ರಯಾಣಿಕರು ಬರುವ ಆಟೋ, ಕ್ಯಾಬ್ ನಿಲ್ದಾಣದ ಒಳಗೆ ಬಿಡಲಾಗುತ್ತದೆ. ರೈಲು ನಿಲ್ದಾಣಕ್ಕೆ ಬರುವ ಎಲ್ಲಾ ಪ್ರಯಾಣಿಕರನ್ನು ಸ್ಕ್ರೀನಿಂಗ್ ಮಾಡಲಾಗುತ್ತದೆ. ಕೊರೋನಾದ ಯಾವುದೇ ಲಕ್ಷಣ ಇಲ್ಲದಿದ್ದರೆ ಮಾತ್ರ ರೈಲು ಹತ್ತಲು ಅವಕಾಶ ನೀಡಲಾಗುತ್ತದೆ. ಪ್ರಯಾಣಿಕರು ನಿಲ್ದಾಣದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ.
ರೈಲ್ವೆ ನಿಲ್ದಾಣದ ಒಳ ಹೋಗುವಾಗ, ಹೊರ ಬರುವಾಗ ಮತ್ತು ರೈಲನ್ನು ಹತ್ತುವಾಗ, ಇಳಿಯುವಾಗ ಹ್ಯಾಂಡ್ ಸ್ಯಾನಿಟೈಸರ್‌ನಿಂದ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳುವುದು ಕಡ್ಡಾಯ. ಪ್ರಯಾಣದ ಅವಧಿಯಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!