Thursday, December 2, 2021

ಕ್ವಾರಂಟೈನ್ ಗೆ ಗುಜರಾತ್ ಸಿಎಂ ರೂಪಾನಿ

Follow Us

ಅಹಮದಾಬಾದ್: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ.
ಬುಧವಾರ ಕೋವಿಡ್ 19 ಪರೀಕ್ಷೆಗೆ ಒಳಪಟ್ಟ ಸಿಎಂ ರೂಪಾನಿ ಕ್ವಾರಂಟೈನ್ ಗೆ ಒಳಪಡಲು ನಿರ್ಧರಿಸಿದರು ಎಂದು ಗುಜರಾತ್ ಸರ್ಕಾರದ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ. ಕ್ವಾರಂಟೈನ್ ಅವಧಿಯಲ್ಲಿ ಸರ್ಕಾರದ ಎಲ್ಲಾ ಕೆಲಸಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ರೂಪಾನಿ ನಿರ್ವಹಿಸಲಿದ್ದಾರೆ.
ಗಾಂಧಿನಗರದಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮಂಗಳವಾರ ಕಾಂಗ್ರೆಸ್ ನಾಯಕರು ಸಿಎಂ ರೂಪಾನಿಯನ್ನು ಭೇಟಿ ಮಾಡಿದ್ದರು. ಈ ಭೇಟಿ ವೇಳೆ ಸ್ಥಳೀಯ ಕಾಂಗ್ರೆಸ್ ಶಾಸಕ ಖೇಡಾವಾಲಾ ಕೂಡ ಇದ್ದರು. ಅವರಿಗೆ ಸಂಜೆ ವೇಳೆಗೆ ಕೊರೋನಾ ಸೋಂಕು ತಗಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಸಿಎಂ ರೂಪಾಣಿ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ. ಸಿಎಂ ಕ್ವಾರಂಟೈನ್ ಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ ಎಂದು ನ್ಯೂಸಿಕ್ಸ್.ಕಾಂ ಮಂಗಳವಾರ ತಡರಾತ್ರಿಯೇ ವರದಿ ಮಾಡಿತ್ತು.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!