Saturday, April 17, 2021

ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಸಾವು

ಮಂಗಳೂರು: ಗುಡ್ಡ ಕುಸಿದು 4 ಮನೆಗಳು ನೆಲಸಮಗೊಂಡು ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ದುರ್ಮರಣಕ್ಕಿಡಾಗಿದ್ದಾರೆ.
16 ವರ್ಷದ ಸಫ್ಜಾನ್ ಮತ್ತು 10 ವರ್ಷದ ಸಹಲಾ ಮೃತಪಟ್ಟ ದುರ್ದೈವಿಗಳು. ಮಂಗಳೂರಿನ ಗುರುಪುರ ಬಳಿಯ ಬಂಗ್ಲೆಗುಡ್ಡೆಯಲ್ಲಿ ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಗುಡ್ಡ ಕುಸಿದ ಪರಿಣಾಮ 4 ಮನೆಗಳು ಮಣ್ಣಿನಲ್ಲಿ ಸಿಲುಕಿದ್ದವು. ಮಣ್ಣಿನಡಿ 16 ವರ್ಷ ಹಾಗೂ 10 ವರ್ಷ ಇಬ್ಬರು ಬಾಲಕರು ಮಣ್ಣಿನಡಿ ಸಿಲುಕಿದ್ದು, ಅವರನ್ನು ರಕ್ಷಿಸಲು ಹರಸಾಹಸಪಡಲಾಯಿತು. ಸಂಜೆ 5 ಗಂಟೆ ಸುಮಾರಿಗೆ ಇಬ್ಬರು ಮಕ್ಕಳ ದೇಹ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಮಧ್ಯಾಹ್ನ 12 ಗಂಟೆ ವೇಳೆಗೆ ಮಡಿಕೇರಿ ಮಾದರಿಯಲ್ಲೇ ಏಕಾಏಕಿ ಗುಡ್ಡ ಕುಸಿದಿದ್ದು ಈ ವೇಳೆ ಮನೆಯಲ್ಲಿ ಆಟವಾಡಿಕೊಂಡಿದ್ದ 16 ವರ್ಷದ ಬಾಲಕ ಹಾಗೂ 10 ವರ್ಷದ ಬಾಲಕಿ ಮಣ್ಣಿನಡಿ ಸಿಲುಕಿದ್ದರು. ಮಣ್ಣಿನ ಅಡಿಯಿಂದ ಮಹಿಳೆಯೊಬ್ಬಳನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೇ ಮಣ್ಣಿನಡಿ ಸಿಲುಕಿದ ಮಕ್ಕಳು ಸಾವನ್ನಪ್ಪಿದ್ದಾರೆ.
ಈಗಾಗಲೇ ಸ್ಥಳಕ್ಕೆ ಪೊಲೀಸರು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ 25 ಕ್ಕೂ ಹೆಚ್ಚು ಎನ್ ಡಿಅರ್ ಎಫ್ ಸಿಬ್ಬಂದಿ ಸತತ ನಾಲ್ಕೂವರೆ ರಕ್ಷಣಾ ಕಾರ್ಯಾಚರಣೆ ಆರಂಭಗೊಂಡಿದೆ. ಮಳೆ‌ ನಿಂತಿದ್ದರಿಂದ ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ.


ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!