newsics.com
ಶಿಮ್ಲಾ(ಹಿಮಾಚಲ ಪ್ರದೇಶ): ಇಲ್ಲಿನ ಕಿನ್ನೌರ್ನಲ್ಲಿ ಬುಧವಾರ ಸಂಭವಿಸಿದ ಭಾರೀ ಭೂಕುಸಿತದಲ್ಲಿ ವಾಹನಗಳು ಸಿಲುಕಿದ್ದು, ಅನೇಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಭೂಕುಸಿತದಲ್ಲಿ ಓರ್ವ ಮೃತಪಟ್ಟಿದ್ದು, 25-30 ಜನ ಅವಶೇಷಗಳಡಿ ಸಿಲುಕಿರಬಹುದೆಂದು ಅಧಿಕಾರಿಗಳು ಶಂಕಿಸಿದ್ದಾರೆ.
ಭಾರೀ ಭೂಕುಸಿತದ ಬಳಿಕ ವಾಹನಗಳು ಅವಶೇಷಗಳಡಿ ಸಿಲುಕಿರುವುದರಿಂದ ಹೆಚ್ಚಿನ ಸಾವು ನೋವು ಉಂಟಾಗಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.