ಇಂಫಾಲ್ (ಮಣಿಪುರ): ಸೇನಾ ನೆಲೆಯೊಂದರಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಈವರೆಗೆ ಆರು ಮಂದಿಯ ಶವ ಹೊರತೆಗೆಯಲಾಗಿದೆ. 50ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. 13 ಜನರನ್ನು ರಕ್ಷಣೆ ಮಾಡಲಾಗಿದೆ.
ಮಣಿಪುರದ ನೋನಿ ಜಿಲ್ಲೆಯ ತುಪುಲ್ ರೈಲ್ವೆ ನಿಲ್ದಾಣದ ಬಳಿಉ 107 ಪ್ರಾದೇಶಿಕ ಸೇನಾ ಶಿಬಿರದಲ್ಲಿ ಈ ದುರಂತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ಬಗ್ಗೆ ಚರ್ಚಿಸಲು ಮಣಿಪುರ ಸಿಎಂ ಬಿರೇನ್ ಸಿಂಗ್ ತುರ್ತು ಸಭೆ ಕರೆದಿದ್ದಾರೆ.
ಭೂಕುಸಿತದಲ್ಲಿ ಗಾಯಗೊಂಡಿರುವವರಿಗೆ ನೋನಿಯಲ್ಲಿರೋ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭೂಕುಸಿತದಿಂದಾಗಿ ಹಲವೆಡೆ ರಸ್ತೆ ಸಂಚಾರಕ್ಕೂ ಅಡ್ಡಿಯಾಗಿದೆ. ಪ್ರವಾಸಿಗರು ಈ ಮಾರ್ಗದಲ್ಲಿ ಸಂಚರಿಸದಂತೆ ಜಿಲ್ಲಾಡಳಿತ ಸೂಚಿಸಿದೆ. ಭೂಕುಸಿತದ ಅವಶೇಷಗಳಡಿ ಸಿಕ್ಕಿಹಾಕಿಕೊಂಡವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ.
ಗ್ರಾಹಕರನ್ನು ಬರಮಾಡಿಕೊಳ್ಳಲು ಸಜ್ಜಾಗಿದೆ ಎಂದಿಗೂ ಲ್ಯಾಂಡ್ ಆಗದ ಹಾರುವ ಹೋಟೆಲ್