newsics.com
ಬೆಂಗಳೂರು: ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಬುಧವಾರವೂ ಮುಂದುವರಿದಿದೆ.
ಇನ್ನೂ ಮೂರು ದಿನಗಳ ಕಾಲ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಸುಳಿ ಗಾಳಿಯ ಪರಿಣಾಮದಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ ಮಳೆ ಸುರಿಯುತ್ತಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ. ಬುಧವಾರವೂ ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿದೆ.
ಅಕ್ಟೋಬರ್ 16ರ ನಂತರ ಮಳೆ ಇಳಿಮುಖವಾಗಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಅದು ಚಂಡಮಾರುತವಾಗಿ ಪರಿವರ್ತನೆಯಾಗುತ್ತಿದೆ. ಚಂಡಮಾರುತ ಒಡಿಶಾ ಕಡೆಗೆ ಚಲಿಸಿದೆ. ಹೀಗಾಗಿ, ಅಕ್ಟೊಬರ್ 16ರ ನಂತರ ಮತ್ತೆ ವಾತಾವರಣದಲ್ಲಿ ಬದಲಾವಣೆ ಉಂಟಾಗಿ ಹಿಂಗಾರು ಮಳೆ ಆರಂಭವಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.