Tuesday, April 13, 2021

ಭಾರೀ ಮಳೆ, ಕೃಷ್ಣ ಪ್ರವಾಹ ಹೆಚ್ಚಳ, 7‌ ಬ್ಯಾರೇಜ್ ಜಲಾವೃತ

ಬೆಳಗಾವಿ: ದಕ್ಷಿಣ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕೃಷ್ಣಾ ನದಿ ನೀರಿನ ಹರಿವು ಹೆಚ್ಚಿದೆ. ಜಿಲ್ಲೆಯ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ ಏಳು ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಜಲಾವೃತವಾಗಿವೆ.
ಚಿಕ್ಕೋಡಿ ತಾಲ್ಲೂಕಿನ ಕೃಷ್ಣಾ ನದಿಯ ಕಲ್ಲೋಳ-ಯಡೂರ, ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ, ನಿಪ್ಪಾಣಿ ತಾಲ್ಲೂಕಿನ ದೂಧಗಂಗಾ ನದಿಗೆ ಅಡ್ಡಲಾಗಿರುವ ಕಾರದಗಾ-ಭೋಜ, ವೇದಗಂಗಾ ನದಿಗೆ ಅಡ್ಡಲಾಗಿರುವ ಬಾರವಾಡ- ಕುನ್ನೂರ, ಕೊನ್ನೂರ-ಭೋಜವಾಡಿ, ಅಕ್ಕೋಳ- ಸಿದ್ನಾಳ, ಜತ್ರಾಟ- ಭೀವಶಿ ಸೇತುವೆಗಳು ಜಲಾವೃತವಾಗಿವೆ.
ದೂಧ್‌ಗಂಗಾ ನದಿಯಿಂದ15,488 ಕ್ಯುಸೆಕ್, ರಾಜಾಪುರ ಬ್ಯಾರೇಜ್‌ನಿಂದ46,750 ಕ್ಯುಸೆಕ್ ಸೇರಿದಂತೆ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 62,228 ಕ್ಯುಸೆಕ್ ನೀರು ಹರಿದುಬರುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!