Tuesday, January 31, 2023

ಅ.10ರವರೆಗೂ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ‌ ಮಳೆ ಸಾಧ್ಯತೆ

Follow Us

newsics.com

ಬೆಂಗಳೂರು: ಅಕ್ಚೋಬರ್ 10ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಾಯುಭಾರ ಕುಸಿತ ಹಿನ್ನೆಲೆಯಲ್ಲಿ 4 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಪ್ರಾಕೃತಿಕ ಮತ್ತು ನೈಸರ್ಗಿಕ ವಿಕೋಪ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದೂ (ಗುರುವಾರ) ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನ ಸುತ್ತಮುತ್ತ ಇಂದು ಮೋಡ ಕವಿದ ವಾತಾವರಣವಿದೆ. ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಷಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಷಿಯಸ್ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಬುಧವಾರ (ಅ.5) ರಾತ್ರಿಯಿಂದ ಸುರಿದ ಮಳೆ ಇಂದು ಮುಂಜಾನೆವರೆಗೂ ಮುಂದುವರೆಯಿತು. ಬಸವನಗುಡಿ, ಮಲ್ಲೇಶ್ವರಂ, ರಾಜಾಜಿನಗರ, ಆರ್ಆರ್ ನಗರ, ಹೆಬ್ಬಾಳ, ಯಲಹಂಕ, ಎಲೆಕ್ಟ್ರಾನಿಕ್ ಸಿಟಿ, ಕೋರಮಂಗಲ, ಬನಶಂಕರಿ, ಪದ್ಮನಾಭನಗರ, ಹನುಮಂತನಗರ, ಗಿರಿನಗರ, ಚಾಮರಾಜಪೇಟೆ ಸೇರಿದಂತೆ ಹಲವೆಡೆ ಮಳೆ ಸುರಿದಿದೆ. ಇದರಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಮಳೆಯಿಂದ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮರಗಳು ಬಿದ್ದಿದ್ದು, ಇನ್ನು ಕೆಲವೆಡೆ ಮನೆ, ಅಪಾರ್ಟ್ಮೆಂಟ್‌ಗಳಿಗೆ ನೀರು ನುಗ್ಗಿದೆ.

ಬೆಂಗಳೂರಲ್ಲಿ ಮಕ್ಕಳ ಮಾರಾಟ ಜಾಲ ಬಯಲು: 6 ಮಂದಿ ಬಂಧನ

ಲಖೀಂಪುರಕ್ಕೆ ಭೇಟಿ ನೀಡಲು ರಾಹುಲ್ ಗಾಂಧಿಗೆ ಅನುಮತಿ

ರಾಜ್ಯಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ

ಕಾರಿನ ಟೈರ್ ಸಿಡಿದು ತಾಯಿ, ಮಗ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!