Saturday, April 17, 2021

ಭಾರೀ ಮಳೆಗೆ ಬೆಂಗಳೂರು ತತ್ತರ; ವೃಷಭಾವತಿ ಪ್ರವಾಹಕ್ಕೆ ಮೈಸೂರು ರಸ್ತೆ ಕುಸಿತ

ಬೆಂಗಳೂರು: ನಗರದಲ್ಲಿ ಗುರುವಾರ ಸಂಜೆಯಿಂದ ವ್ಯಾಪಕ ಮಳೆಯಾಗುತ್ತಿದೆ. ವೃಷಭಾವತಿ ತುಂಬಿ ಹರಿದಿದ್ದು, ತಡೆ ಗೋಡೆ ಕೊಚ್ಚಿ ಹೋಗಿ ಮೈಸೂರು ರಸ್ತೆ ಕುಸಿದು ಹೋಗಿದೆ.
ಗುರುವಾರ ಸಂಜೆ 4.30ರ ಸುಮಾರಿಗೆ ನಗರದಲ್ಲಿ ಮಳೆ ಆರಂಭವಾಗಿದ್ದು, 6.30ರ ತನಕ ಗುಡುಗು ಮತ್ತು ಸಿಡಿಲಿನ ಜತೆಗೆ ಮಳೆ ಸುರಿದಿದೆ. ರಾತ್ರಿ 11 ಗಂಟೆ ಸುಮಾರಿಗೆ ಮತ್ತೆ ಮಳೆ ಆರಂಭವಾಗಿದ್ದು, ತಡರಾತ್ರಿವರೆಗೂ ಭಾರೀ ಮಳೆ ಸುರಿದಿದೆ.
ನಗರದಲ್ಲಿ ಸುರಿದ ಮಳೆಯಿಂದಾಗಿ ವೃಷಭಾವತಿ ತುಂಬಿ ಹರಿದಿದೆ. ಇದರಿಂದಾಗಿ ಕೆಂಗೇರಿ ಬಳಿಯ ದುಬಾಸಿಪಾಳ್ಯದಲ್ಲಿ ನದಿಗೆ ಕಟ್ಟಲಾಗಿದ್ದ ತಡೆಗೋಡೆ ಕೊಚ್ಚಿ ಹೋಗಿದೆ. ಇದರಿಂದಾಗಿ ಹಲವು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಲ್ಲದೆ, ಭಾರೀ ಗಾಳಿ ಮಳೆಗೆ ಬೆಂಗಳೂರಿನ ಹಲವೆಡೆ ಮರಗಳು ಧರೆಗುರುಳಿವೆ.
ವೃಷಭಾವತಿ ಪ್ರವಾಹದಿಂದಾಗಿ ಬೆಂಗಳೂರು-ಮೈಸೂರು ಸಂಪರ್ಕಿಸುವ ರಸ್ತೆ ಸುಮಾರು 3 ಅಡಿಯಷ್ಟು ಕುಸಿದಿದೆ. ಶುಕ್ರವಾರವೇ (ಜೂನ್ 26) ರಸ್ತೆ ದುರಸ್ತಿ ಕಾರ್ಯ ಆರಂಭಿಸುವುದಾಗಿ ಎಂದು ಬಿಬಿಎಂಪಿ ಹೇಳಿದೆ.
ವೃಷಭಾವತಿ ತುಂಬಿ ಹರಿಯುತ್ತಿರುವ ಮತ್ತು ತಡೆ ಗೋಡೆ ಕುಸಿದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೃಷಭಾವತಿ ನೀರಿನಲ್ಲಿ ಹಲವು ವಾಹನಗಳು ಸಹ ಸಿಕ್ಕಿ ಹಾಕಿಕೊಂಡಿರುವ ಫೋಟೋಗಳು ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿವೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!