newsics.com
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಿದೆ. ಬೆಂಗಳೂರಿನಲ್ಲೂ ಭಾನುವಾರ ಮುಂಜಾನೆಯಿಂದಲೂ ಜಿಟಿಜಿಟಿ ಮಳೆ ಮುಂದುವರಿದಿದೆ. ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ,ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಜಿಲ್ಲೆಗಳ ನದಿಗಳು, ಹೊಳೆಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ರಸ್ತೆಗಳು, ನದಿಗಳು ಮುಳುಗಡೆಗೊಂಡ ಪರಿಣಾಮ ಅನೇಕ ಹಳ್ಳಿಗಳಿಗೆ, ನಗರಗಳಿಗೂ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಭಾರೀ ಮಳೆ ಹಿನ್ನೆಲೆ; ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ
ಉಡುಪಿಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಕಾರ್ಕಳ ತಾಲೂಕಿನ ಮಾಳಘಾಟಿಯಲ್ಲಿ ಗುಡ್ಡ ಕುಸಿದಿದೆ. ಅಲ್ಲದೇ ಮರಳಗಳು ಉರುಳಿವೆ. ಈ ಹಿನ್ನೆಲೆಯಲ್ಲಿ ಕೆಲ ಕಾಲ ಮಾಳ ಘಾಟಿ ಸಂಪೂರ್ಣ ಬಂದ್ ಆಗಿತ್ತು.
ಉಡುಪಿಗೆ ಈಗಾಗಾಲೆ ಎನ್’ಡಿಆರ್’ಎಫ್ ತಂಡ ಕಳುಹಿಸಲಾಗಿದ್ದು, ರಕ್ಷಣಾ ಕಾರ್ಯ ಆರಂಭವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಭಾರೀ ಮಳೆ ಹಿನ್ನೆಲೆಯಲ್ಲಿ ಈಗಾಗಲೇ ಮಂಗಳೂರು ವಿವಿ ನಾಳೆ ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಿದೆ.
ಚಿಕ್ಕಮಗಳೂರಿನಲ್ಲಿಯೂ ವರುಣ ಅಬ್ಬರಿಸಿದ್ದಾನೆ. ಧಾರಾಕಾರ ಮಳೆಯಿಂದಾಗಿ ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಉಕ್ಕಿ ಹರಿಯುತ್ತಿರುವ ಜಲಪಾತ ವೀಕ್ಷಿಸಲು ಪ್ರವಾಸಿಗರ ದಂಡೇ ಸೇರಿದೆ. ಮುಳ್ಳಯ್ಯನಗಿರಿ, ದತ್ತಪೀಠ ಭಾಗಗಳಲ್ಲಿಯೂ ಧಾರಾಕರ ಮಳೆ ಸುರಿಯುತ್ತಿದೆ. ಸಾಗರ, ಸೊರಬ, ತೀರ್ಥಹಳ್ಳಿ ಸೇರಿ ಶಿವಮೊಗ್ಗ ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರೆದಿದೆ.
ಬೆಂಗಳೂರಿನಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತ ಅವರಿಗೆ ಕರೆ ಮಾಡಿ ರಾಜಕಾಲುವೆ, ತಗ್ಗು ಪ್ರದೇಶಗಳಲ್ಲಿರುವ ಬಡಾವಣೆಗಳಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ?
ಬಿಹಾರದ ಕಾಲುವೆ ಮಹಾ ಸಾಧಕನಿಗೆ ಟ್ರ್ಯಾಕ್ಟರ್ ಘೋಷಿಸಿದ ಮಹೀಂದ್ರಾ
ನೇಪಾಳಕ್ಕೆ ಅತ್ಯಾಧುನಿಕ ರೈಲು ಉಡುಗೊರೆ ನೀಡಿದ ಭಾರತ